ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಧರ್ಮಸ್ಥಳ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-1 ಜಿಲ್ಲೆ ಇದರ ಸಹಯೋಗದಲ್ಲಿ ಕುಣಿಗಲ್ ಯೋಜನಾ ಕಛೇರಿ ವ್ಯಾಪ್ತಿಯ ಶ್ರೀ ಕೊಲ್ಲಾಪುರದಮ್ಮ ದೇವಿ ದೇವಸ್ಥಾನದ ಸಭಾ ಭವನದಲ್ಲಿ ಗಾಂಧಿ ಸ್ಮರಣೆ ಮತ್ತು ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಸತೀಶ್ ಶೇಟ್ ರವರು ಸರ್ವರನ್ನು ಸ್ವಾಗತಿಸಿದರು. ಶ್ರೀ ಕೆ.ಎಲ್. ಬೋರೇಗೌಡ ಕ್ಷೇತ್ರ ಶಿಕ್ಷಣಾಧಿಕಾರಿ ಕುಣಿಗಲ್ ಇವರು ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ,ಸಾಮಾಜಿಕ ಸೇವೆಯಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಯು ತೊಡಗಿಸಿರುವ ಕಾರ್ಯವನ್ನು ಪ್ರಶಂಸಿಸಿದರು. ವೇದಿಕೆಯಲ್ಲಿರುವ ಎಲ್ಲಾ ಅತಿಥಿಗಳು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ನವಜೀವನ ಸಮಿತಿ ಸದಸ್ಯರಿಗೆ ಹೂ ನೀಡಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಗಳಾಗಿ ತುಮಕೂರು -1 ಜಿಲ್ಲೆಯ ಮಾನ್ಯ ಹಿರಿಯ ನಿರ್ದೇಶಕರಾದ ಶ್ರೀಮತಿ ದಯಾಶೀಲ ಮೇಡಂ ರವರು ಗಾಂಧಿ ಸ್ಮೃತಿ ಕಾರ್ಯಕ್ರಮದ ಧ್ಯೇಯೋದ್ದೇಶಗಳು ಹಾಗೂ ಗಾಂಧೀಜಿಯವರ ತತ್ವ ಆದರ್ಶಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮುನ್ನಡೆಸುವ ರೀತಿ ಹಾಗೂ ಕಾರ್ಯವೈಖರಿಯನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರವೀಂದ್ರ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಕುಣಿಗಲ್ ವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜನಜಾಗೃತಿ ಮೇಲ್ವಿಚಾರಕರು, ತಾಲೂಕಿನ ಎಲ್ಲಾ ಮೇಲ್ವಿಚಾರಕ ಸಿಬ್ಬಂದಿಗಳು,ನವಜೀವನ ಸಮಿತಿ ಸದಸ್ಯರು,ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿ ಬಂಧು/ ಸ್ವ ಸಹಾಯ ಸಂಘದ ಸದಸ್ಯರು, ಸೇವಪ್ರತಿನಿಧಿಯವರು ಉಪಸ್ಥಿತರಿದ್ದರು.
