ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಜ್ಜಂಪುರ ತಾಲೂಕು, ಇವರ ಸಹಯೋಗದಲ್ಲಿ ಪದ್ಮ ವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹಾಗೂ ಡಾಕ್ಟರ್ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಅವರ ಶುಭ ಆಶೀರ್ವಾದದೊಂದಿಗೆ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಷ್ಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಕಾರ್ಯಕ್ರಮ ಮತ್ತು ಜನಜಾಗೃತಿ ಸಮಾವೇಶ. ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಸಮುದಾಯ ಭವನ ಮುಗಳಿಕಟ್ಟೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ನಿರ್ದೇಶಕರಾದ ಪ್ರಕಾಶ್ ರಾವ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಗಾಂಧೀಜಿಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರು ಸಮಾಜಮುಖಿ ಕೆಲಸಗಳನ್ನು ಮಾಡಿ ಮಹಾತ್ಮರಾಗಿದ್ದಾರೆ. ಅಕ್ಟೋಬರ್ 2 ರಂದು ಕೇವಲ ಗಾಂಧಿ ಜಯಂತಿಯನ್ನು ಆಚರಿಸದೆ ವಿಶ್ವ ಅಹಿಂಸಾತ್ಮಕ ದಿನವೆಂದು ಆಚರಣೆ ಮಾಡಲಾಗುತ್ತಿದೆ. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಶಿಕ್ಷಕರಾದ ಶ್ರೀಯುತ ಚಂದ್ರಶೇಖರ್ ರವರು ಸ್ವಾತಂತ್ರ್ಯ ಸಿಗಲು ಗಾಂಧೀಜಿಯವರು ಹಾಗೂ ದೇಶದ ಇತರ ಸ್ವಾತಂತ್ರ್ಯ ಯೋಧರೆಲ್ಲರೂ ಶ್ರಮ ಪಟ್ಟಿರುವ ವಿಷಯದ ಬಗ್ಗೆ ವಿವರಿಸಿದರು.
