ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನ ಜಾಗೃತಿ ವೇದಿಕೆ ಹಾಸನ ವತಿಯಿಂದ ಅಕ್ಟೋಬರ್ 2 ಗಾಂಧಿ ಜಯಂತಿಯ ಪ್ರಯುಕ್ತ ಗಾಂಧೀ ಸ್ಮೃತಿ, ಬೃಹತ್ ಜನಜಾಗೃತಿ ಜಾತ ಮತ್ತು ವ್ಯಸನ ಮುಕ್ತ ರಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10/10/2023 ರಂದು ಜ್ಞಾನಾಕ್ಷಿ ಸಭಾಭವನ ಹಾಸನದಲ್ಲಿ ಜರಗಿತು. ಈ ಕಾರ್ಯಕ್ರಮ ದ ಜಾತದ ಚಾಲನೆ ಶ್ರೀ ಸತೀಶ್ ಹೊನ್ನವಳ್ಳಿ ಮಾಜಿ ರಾಜ್ಯಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇವರು ನೆರವೇರಿಸಿದರು ಕಾರ್ಯಕ್ರಮದ ಉದ್ಘಾಟನೆ ಬಿ ಕೆ ರವಿಕಾಂತ್ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಸನ ಇವರು ನೆರವೇರಿಸಿ ಕಾರ್ಯಕ್ರಮಕ್ಕೆ
ಶುಭ ಹಾರೈಕೆಯನ್ನು ಮಾಡಿದರು.ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಚ್ ಡಿ ರೇವಣ್ಣ ಮಧ್ಯವರ್ಜನ ಶಿಬಿರಗಳ ಬಗ್ಗೆ ಉತ್ತಮi ಶ್ಲಾಘನೀಯ ವ್ಯಕ್ತಪಡಿಸಿದರು. ಸದ್ರಿ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಸಂಗಮೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು, ಸಂತ ಅಂತೋಣಿಯವರ ದೇವಾಲಯದ ಧರ್ಮ ಗುರುಗಳಾದ Fr. ಪ್ಯಾಟ್ರಿಕ್ ಜೆ. ರಾವ್ ಕಾರ್ಯಕ್ರಮದ ಬಗ್ಗೆ ಶುಭ ಸಂದೇಶವನ್ನು ನೀಡಿದರು. ಗಾಂಧಿಜಿಯವರ ವಿಚಾರಧಾರೆ ಬಗ್ಗೆ ಶ್ರೀ ಚೇತನ್ ರಾ0 ಆರ್ ಎ ಮ್ಯಾನೇಜಿಂಗ್ ಟ್ರಸ್ಟಿ ಪರಿವರ್ತನ ಸಮೂಹ ಸಂಸ್ಥೆ ಇವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಶ್ರೀ ವಿವೇಕ್ ವಿ ಪಾಯ್ಸ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗ್ರತಿ ವೇದಿಕೆ ಬೆಳೆದು ಬಂದ ದಾರಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯರ ಕಲ್ಪನೆ ಹಾಗೂ ಮಹಿಳೆಯರ ಸಬಲೀಕರಣದ ಬಗ್ಗೆ ಮಾರ್ಗದರ್ಶನ ನೀಡಿದರು. ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಜಯರಾಮ್ ನೆಲ್ಲಿತ್ತಾಯ ಅವರು ಗಾಂಧಿ ತತ್ವ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಜನಜಾಗೃತಿ ಅಧ್ಯಕ್ಷರಾದ ಶ್ರೀ ಡಾಕ್ಟರ್ ನವೀನ್ ಚಂದ್ರ ಶೆಟ್ಟಿ ರವರು ವಹಿಸಿಕೊಂಡಿದ್ದರು ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರು, ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾದೇಶಿಕ ಜನಜಾಗೃತಿ ಯೋಜನಾಧಿಕಾರಿ ಜಿಲ್ಲೆಯ ಎಲ್ಲಾ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
