ತುಮಕೂರು 2 ಜಿಲ್ಲೆಯ ಶಿರಾ ನಗರದಲ್ಲಿ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಪಾನಮುಕ್ತ ಸದಸ್ಯರ ಸಮಾವೇಶ ಕಾರ್ಯಕ್ರಮ

Janajagurthi Vedike News

ಇಂದು ತುಮಕೂರು 2 ಜಿಲ್ಲೆಯ ಶಿರಾ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಶಿರಾ ತಾಲ್ಲೂಕು, ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು 2 ಮತ್ತು ಶ್ರೀ ವಿದ್ಯಾ ಗಣಪತಿ ಮಂಡಳಿ ಶಿರಾ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಪಾನಮುಕ್ತ ಸದಸ್ಯರ ಸಮಾವೇಶ ಕಾರ್ಯಕ್ರಮ ನಡೆಯಿತು. ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಶಿರಾ ನಗರಸಭೆ ಅಧ್ಯಕ್ಷೆ ಶ್ರೀಮತಿ ಪೂಜಾಪೆದ್ದರಾಜ್ ರವರು ಚಾಲನೆ ನೀಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಯಂ.ಸರ್ ರವರು ಉದ್ಘಾಟಿಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಸಭಾ ಅಧ್ಯಕ್ಷತೆಯನ್ನು ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ರಾಮಚಂದ್ರ ಗುಪ್ತರವರು ವಹಿಸಿದ್ದರು. ಪಾನಮುಕ್ತ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಚಿದಾನಂದ ಯಂ ಗೌಡರವರು ನೆರವೇರಿಸಿ ಮಾರ್ಗದರ್ಶನ ನೀಡಿದರು.ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ. ಸರ್ ರವರು ಪ್ರಸ್ತಾವನೆಯೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ತುಮಕೂರಿನ ಉದ್ಯಮಿ ಹಾಗೂ ಸಮಾಜ ಸೇವಕರಾದ ಡಾ.ಆರ್ ಎಲ್ ರಮೇಶ್ ಬಾಬು, ತುಮಕೂರು ಹಾಲು ಒಕ್ಕೂಟದ ನಿರ್ದೇಶಕರು ಹಾಗೂ ರೇಷ್ಮೆನಿಗಮ ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಆರ್ ಗೌಡ, ಶಿರಾ ಶ್ರೀ ವಿದ್ಯಾ ಗಣಪತಿ ಭಕ್ತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಶ್ವತ್ಥನಾರಾಯಣ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜನಜಾಗೃತಿ ವೇದಿಕೆಯ ಸದಸ್ಯರು, ಶಿರಾ 1, ಶಿರಾ 2 ಯೋಜನಾಧಿಕಾರಿಗಳು, ಜಿಲ್ಲಾ MIS ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.