ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನಲ್ಲಿ 1757 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕನ್ನಡ ಭವನದಲ್ಲಿ 1757ನೇ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಅಭಿವೃದ್ಧಿ ಯೋಜನೆ ಯ ಟ್ರಸ್ಟಿಗಳಾದ ಶ್ರೀ ಸಂಪತ್ ಸಾಮ್ರಾಜ್ಯ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಧನ ಕೀರ್ತಿ ಬಲಿಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಚೌಟ, ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕು.ರಾಧಾ, ಸುದರ್ಶನ ಎಂ ಪಿ, ಪ್ರಸಾದ್ ಕುಮಾರ್, ಜನಜಾಗೃತಿ ಪದಾಧಿಕಾರಿಗಳಾದ ದಿನೇಶ್ ಆನಡ್ಕ, ಲಕ್ಷ್ಮಣ್ ಸುವರ್ಣ, ಭಾಗವಹಿಸಿದ್ದರು. ತಾಲೂಕು ಯೋಜನಾಧಿಕಾರಿ ಶ್ರೀಮತಿ ಸುನಿತಾ ನಾಯಕ್ ಸ್ವಾಗತಿಸಿದರು. ಜನಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ, ಶ್ರೀ ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಮೇಲ್ವಿಚಾರಕಿ ಮಮತಾ ವಂದಿಸಿದರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ಚಿಕಿತ್ಸಾ ತಂಡದಲ್ಲಿ ಶಿಬಿರಾಧಿಕಾರಿ ದಿವಾಕರ್ ಪೂಜಾರಿ ಹಾಗೂ ಆರೋಗ್ಯ ಸಹಾಯಕಿ ಶ್ರೀಮತಿ ಜಯಲಕ್ಷ್ಮಿಯವರು ಕರ್ತವ್ಯ ನಿರ್ವಹಿಸಲಿದ್ದಾರೆ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ನವಜೀವನ ಸಮಿತಿ ಸದಸ್ಯರು ಯೋಜನೆ ಕಾರ್ಯಕರ್ತರು ಉಪಸ್ಥಿತರಿದ್ದರು.