ರಾಮನಗರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike Announcements

ಮೈಸೂರು ಪ್ರಾದೇಶಿಕ ವಿಭಾಗದ ರಾಮನಗರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ರಾಮನಗರ ಜಿಲ್ಲಾ ಕಚೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.ಗಾಂಧಿ ಜಯಂತಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ,ಮಧ್ಯವರ್ಜನ ಶಿಬಿರ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಅರ್ಧವಾರ್ಷಿಕ ಸಾಧನೆಯ ವಿಮರ್ಶೆ, ಶತದಿನೋತ್ಸವ ಕಾರ್ಯಕ್ರಮ, ರಾಜ್ಯ ವೇದಿಕೆ ಮಹಾಸಭೆ, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಶ್ರೀ ಕ್ಷೇತ್ರ ಭೇಟಿಯ ಬಗ್ಗೆ,ನವ ಜೀವನೋತ್ಸವ ಕಾರ್ಯಕ್ರಮ ಹಾಗೂ ಜಿಲ್ಲಾ ಮಟ್ಟದ ಪೋಷಕರ ತರಬೇತಿ ಬಗ್ಗೆ ಸಮಗ್ರ ಚರ್ಚೆಯನ್ನು ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಜಯರಾಮ್ ನೆಲ್ಲಿತ್ತಾಯ ರವರು, ಜಿಲ್ಲಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಚಿಕ್ಕಣ್ಣ ರವರು, ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ನಿರ್ದೇಶಕರಾದ ಜಯಕರ್ ಶೆಟ್ಟಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ರಾಮನಗರ ಜಿಲ್ಲೆಯ ಎಲ್ಲಾ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳ, ಜನಜಾಗೃತಿ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು.