ಮಂಜೇಶ್ವರ ತಾಲೂಕಿನ ತಲಪಾಡಿ ವಲಯದ ಹೊಸಂಗಡಿ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1766ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ ಸಿ ಟ್ರಸ್ಟ್ ಧರ್ಮಸ್ಥಳ, ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲೆಯ, ಮಂಜೇಶ್ವರ ತಾಲೂಕಿನ ತಲಪಾಡಿ ವಲಯದ ಹೊಸಂಗಡಿ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1766ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಗೌರವಾನ್ವಿತರು ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಶೆಟ್ಟಿ ಆರಂಬೋಡಿ ಯವರು, ಜನಜಾಗೃತಿ ವೇದಿಕೆ ಡಾಕ್ಟರ್ ಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರು ಅಶ್ವಥ್ ಪೂಜಾರಿ ಲಾಲ್ ಬಾಗ್, ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಗಳು ಶ್ರೀಮತಿ ಶಶಿಕಲಾ ಸುವರ್ಣ, ಕಾಸರಗೋಡು ತಾಲೂಕಿನ ಯೋಜನಾಧಿಕಾರಿಗಳು ಶ್ರೀಯುತ ಮುಖೇಶ್ ರವರು, ಜನಜಾಗೃತಿ ಉಡುಪಿ ಪ್ರಾದೇಶಿಕ ಭಾಗದ ಯೋಜನಾಧಿಕಾರಿಗಳು ಶ್ರೀಯುತ ಗಣೇಶ ಆಚಾರ್ಯ, ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳು ಶ್ರೀಯುತ ಜಯವಂತ ಪಟಗಾರ್, ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರು ಭಾಸ್ಕರ್, ಕೇಂದ್ರ ಒಕ್ಕೂಟದ ಅಧ್ಯಕ್ಷರು ಉದಯಕುಮಾರ್, ಎಲ್ಲಾ ಸೇವಾ ಪ್ರತಿನಿಧಿಗಳು, ಕಾಸರಗೋಡು ಜಿಲ್ಲೆಯ ಎಲ್ಲಾ ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ನೆರವೇರಿತು.