ಹಿರಿಯೂರಿನಲ್ಲಿ 1768ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಿರಿಯೂರು ತಾಲೂಕು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಿರಿಯೂರು ವಲಯ, ಹಿರಿಯೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆ ಚಿತ್ರದುರ್ಗ ಜಿಲ್ಲೆ/ ನಗರಸಭೆ ಹಿರಿಯೂರು/ ಸಮಾಜ ಕಲ್ಯಾಣ ಇಲಾಖೆ/ಆರೋಗ್ಯ ಇಲಾಖೆ/ ಪೊಲೀಸ್ ಇಲಾಖೆ/ಹಿರಿಯೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ನವಜೀವನ ಸಮಿತಿಗಳು ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಊರಿನ ಗಣ್ಯರು ಮತ್ತು ಉದಾರ ದಾನಿಗಳು ಹಿರಿಯೂರು ತಾಲೂಕು ಇವರುಗಳ ಸಹಕಾರದೊಂದಿಗೆ ಪರಮಪೂಜ್ಯ ಪದ್ಮಭೂಷಣ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಜರುಗುವ 1768ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಹಿರಿಯೂರಿನ ವಾಲ್ಮೀಕಿ ಸಮುದಾಯ ಭವನ, ಶ್ರೀನಿವಾಸ ಬಡಾವಣೆ ಇಲ್ಲಿ ನೆರವೇರಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಚೈತ್ರ ಎಸ್. ಡಿ.ವೈ.ಎಸ್.ಪಿ ಹಿರಿಯೂರು ಇವರು ನೆರವೇರಿಸಿ ಉದ್ಘಾಟಕರ ಮಾತಗಳನ್ನಾಡಿದರು. ಶ್ರೀಮತಿ ಮಮತ ಅಧ್ಯಕ್ಷರು 1768ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಿರಿಯೂರು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ಶುಭವನ್ನು ಕೋರಿದರು. ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಚಿತ್ರದುರ್ಗ ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಿರಿಯೂರು ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ವಿನಯ್ ಕುಮಾರ್ ಸುವರ್ಣ ಇವರು ಮಾತನಾಡಿ ಸಂಸ್ಥೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ, ಅಭಿವೃದ್ಧಿಯ ಪಥ ಮತ್ತು ಸಾಧನೆಯ ಪರಿಚಯದೊಂದಿಗೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಕಿರಣ್ ಕುಮಾರ್ ಜೈನ್ ಮಾಜಿ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಚಿತ್ರದುರ್ಗ, ಶ್ರೀ ಶಾಂತಕುಮಾರ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯೂರು, ಶ್ರೀಮತಿ ಸಿ.ಅಂಬಿಕ ಕೋಶಾಧಿಕಾರಿ 1768ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಿರಿಯೂರು, ಶ್ರೀ ತ್ರಯಂಬಕ ಮೂರ್ತಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯೂರು, ಶ್ರೀಮತಿ ತಿಪ್ಪಮ್ಮ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯೂರು, ಶ್ರೀಮತಿ ಭಾಗ್ಯಮ್ಮ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯೂರು, ಶ್ರೀ ಪ್ರತಾಪ ಸಿಂಹ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಹಿರಿಯೂರು, ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.