ಬೆಂಗಳೂರು ಪ್ರಾದೇಶಿಕ ವಿಭಾಗದ ಶ್ರೀ ಸಿದ್ಧಲಿಂಗೇಶ್ವರ ಸಮುದಾಯ ಭವನ ದಾಬಸ್ ಪೇಟೆಯಲ್ಲಿ 1782 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ ) ನೆಲಮಂಗಲ ತಾಲುಕೂ ಗ್ರಾಮಾಂತರ ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ,ಬೆಂಗಳೂರು, ಶ್ರೀ ಸಿದ್ಧಲಿಂಗೇಶ್ವರ ಸಮುದಾಯ ಭವನ ದಾಬಸ್ ಪೇಟೆ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ದಾಬಸ್ ಪೇಟೆ, ಜಿಲ್ಲಾ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ದಾಬಸ್ ಪೇಟೆ ವಲಯ ಹಾಗೂ ಸಮಸ್ತ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪರಮ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಶ್ರೀ ಸಿದ್ದಗಂಗಾ ಮಠ ಇವರ ಶುಭಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರ ಲ್ಯಾಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1782 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ಸಿದ್ಧಲಿಂಗೇಶ್ವರ ಸಮುದಾಯ ಭವನ ದಾಬಸ್ ಪೇಟೆ ಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಡಾ.ಕೆ ಶ್ರೀನಿವಾಸಮೂರ್ತಿ ಮಾಜಿ ಶಾಸಕರು ನೆಲಮಂಗಲ ವಿ.ಕ್ಷೇತ್ರ ರವರು ನೆರವೇರಿಸಿ ಉದ್ಘಾಟನಾ ನುಡಿಗಳನ್ನು ನುಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಉಮರಬ್ಬ ರವರು ಶಿಬಿರಾರ್ಥಿಗಳಿಗೆ ಶುಭ ಹಾರೈಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರೇಮಾ ತೀರ್ಥಪ್ರಸಾದ್ ಸೋಂಪುರ ಗ್ರಾಪಂ ಅಧ್ಯಕ್ಷರು, ಶ್ರೀ ಗೋವಿಂದರಾಜು ಮಾಜಿ ತಾ.ಪಂ ಅಧ್ಯಕ್ಷರು ಅಗಲಕುಪ್ಪೆ, ಶ್ರೀ ಜಗದೀಶ್ ಚೌದರಿ ಸಮಾಜ ಸೇವಕರು ದಾಬಸ್ ಪೇಟೆ, ಶ್ರೀ ಮೋಹನ್ ಕುಮಾರ್ ಮುಖಂಡರು ಭಾರತೀಪುರ, ಶ್ರೀ ಬೈಲಮೂರ್ತಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಭಾಗವಹಿಸಿ ಶುಭ ಹಾರೈಸಿದರು. ಶ್ರೀ ಶ್ರೀಕಂಠಪ್ಪ ಅಧ್ಯಕ್ಷರು 1782ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ದಾಬಸ್ ಪೇಟೆ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು.