ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಶಿವಮೊಗ್ಗದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಶಿವಮೊಗ್ಗ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಗುಡ್ಡೇಕಲ್ – ಪಿಳ್ಳಂಗಿರಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪಿಳ್ಳಂಗಿರಿ ವಲಯ, ನವಜೀವನ ಸಮಿತಿ ಪಿಳ್ಳಂಗಿರಿ ವಲಯ, ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ) ಗುಡ್ಡೇಕಲ್, ವಿವಿಧ ಸಂಘ ಸಂಸ್ಥೆಗಳು ಮತ್ತು ಊರಿನ ಗಣ್ಯರ ಹಾಗೂ ಸಾರ್ವಜನಿಕರ ಸಹಕಾರಗಳೊಂದಿಗೆ ಪರಮ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ವಿ. ಹೇಮಾವತಿ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರುಗುವ 1784ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ತಾಲೂಕಿನ ಗುಡ್ಡೇಕಲ್ ಗ್ರಾಮದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಸಮುದಾಯ ಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಡಿ.ರಾಜಶೇಖರಪ್ಪ ಅಧ್ಯಕ್ಷರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ) ಗುಡ್ಡೇಕಲ್ ಇವರು ನೆರವೇರಿಸಿ ಉದ್ಘಾಟಕರ ಮಾತಗಳನ್ನಾಡಿದರು. ಶ್ರೀ ಡಿ.ಮೋಹನ್ ರೆಡ್ಡಿ ಅಧ್ಯಕ್ಷರು 1784ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಪಿಳ್ಳಂಗಿರಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ಶುಭವನ್ನು ಕೋರಿದರು. ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಚಿತ್ರದುರ್ಗ ಪ್ರಾದೇಶಿಕ ವಿಭಾಗ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿವಮೊಗ್ಗ ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ಉಮೇಶ್ ಕೆ. ಇವರು ಮಾತನಾಡಿ ಸಂಸ್ಥೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ, ಅಭಿವೃದ್ಧಿಯ ಪಥ ಮತ್ತು ಸಾಧನೆಯ ಪರಿಚಯದೊಂದಿಗೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಹೆಚ್.ಈ ಗಡ್ಲಬಸಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ಆರ್.ರವಿಚಂದ್ರ ಅಧ್ಯಕ್ಷರು 553ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಶಿವಮೊಗ್ಗ, ಶ್ರೀ ರಘುಕುಮಾರ್ ಕಾರ್ಯದರ್ಶಿಗಳು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ (ರಿ) ಗುಡ್ಡೇಕಲ್, ಶ್ರೀಮತಿ ಪುಷ್ಪ ಎಸ್.ಶೆಟ್ಟಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಫಲಾನುಭವಿಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.