218ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿಸೌಧದಲ್ಲಿ 218ನೇ ವಿಶೇಷ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆರ್ಯಭಟ ಪ್ರಶಸ್ತಿ ಪುರಸ್ಕೃತರು ಹಾಗೂ ಶಿಬಿರದ ವೈದ್ಯಾಧಿಕಾರಿಗಳು ಆದ ಡಾ| ಶ್ರೀ ಮೋಹನದಾಸ ಗೌಡ ಇವರು ನೆರವೇರಿಸಿದರು. ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಮೋಹನ್ ಆಡಳಿತಾತ್ಮಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ, ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿಬಿರಾಧಿಕಾರಿಗಳಾದ ಶ್ರೀ ನಂದಕುಮಾರ್ ಪಿ ಪಿ, ಶ್ರೀ ದೇವಿಪ್ರಸಾದ್ ಸುವರ್ಣ, ಶ್ರೀ ವಿದ್ಯಾಧರ್, ಶ್ರೀ ಚಿತ್ತರಂಜನ್, ಆರೋಗ್ಯ ಸಹಾಯಕಿಯರಾದ ಶ್ರೀಮತಿ ಪಿಲೋಮಿನಾ ಡಿಸೋಜಾ, ಕುಮಾರಿ ಶ್ವೇತಾ ಇವರು ಉಪಸ್ಥಿತರಿದ್ದರು. ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.