ಕೊಪ್ಪಳ ಪ್ರಾದೇಶಿಕ ವಿಭಾಗದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕರಮುಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಸಭಾಭವನದಲ್ಲಿ ನವಜೀವನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ನವಜೀವನೋತ್ಸವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಗಣ್ಯರಾದ ಶ್ರೀ ಪಾಂಡುರಂಗಪತ್ತಾರ್, ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್ ವೈ ಎ, ನರಗುಂದ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಶ್ರೀ ಜಗದೀಶ್ ಬಂಡಾರಿ, ವಲಯದ ಮೇಲ್ವಿಚಾರಕರಾದ ಶ್ರೀಮತಿ ಅಕ್ಕಮಹಾದೇವಿ, ನವಜೀವನ ಸಮಿತಿ ಅಧ್ಯಕ್ಷರಾದ ಶ್ರೀ ಗದಿಗೇಶ್ ಪ್ರಭು, ನಮ್ಮ ಜೀವನ ಸಮಿತಿ ಸದಸ್ಯರು ಹಾಗೂ ಕುಟುಂಬ ಸದಸ್ಯರು ಉಪಸಿತರಿದ್ದರು. ಶ್ರೀ ಮಾರುತೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ, ಸಂಕಲ್ಪ ಪೂಜೆ ಈ ಸಂದರ್ಭದಲ್ಲಿ ನಡೆಸಲಾಯಿತು.
