ಕೊಪ್ಪಳ ಪ್ರಾದೇಶಿಕ ವಿಭಾಗದ ನರಗುಂದ ತಾಲೂಕಿನ ನರಗುಂದ ಸಿಟಿ ವಲಯದಲ್ಲಿ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ನರಗುಂದ ತಾಲೂಕಿನ ನರಗುಂದ ಸಿಟಿ ವಲಯದಲ್ಲಿ ನವಜೀವನೋತ್ಸವ ಕಾರ್ಯಕ್ರಮ ನಡೆಸಲಾಯಿತು. ನರಗುಂದ ಸಿಟಿಯ ಶ್ರೀ ಪತ್ರಿವನ್ ಲ ಮಠದ ಆವರಣದಲ್ಲಿ ನವಜೀವನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯರಾದ ಶ್ರೀ ಷ. ಬ್ರ. ಡ್ರಾ ಸಿದ್ದವಿರ ಶಿವಯೋಗಿ ಶಿವಾಚಾರ್ಯ ಮಹಾ ಸ್ವಾಮಿಗಳು ಪತ್ರಿವನ್ ದಿವ್ಯ ಸಾನಿಧ್ಯ ವಹಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಹೆಚ್. ಬಿ. ಅಸೂಟಿ, ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್ ವೈ. ಎ, ಕ್ಷೇತ್ರ ಯೋಜನಾಧಿಕಾರಿ ಶ್ರೀ ಜಗದೀಶ್ ಬಂಡಾರಿ, ವಲಯ ಮೇಲ್ವಿಚಾರಕರಾದ ಶ್ರೀ ರಾಜಸಾಬ್, ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪಾನಮುಕ್ತರಾಗಿ ಹತ್ತು ವರ್ಷ ಪೂರೈಸಿದ 11 ಜನ ನವಜೀವನ ಸಮಿತಿ ಸದಸ್ಯರನ್ನು ವಿಶೇಷವಾಗಿ ಗೌರವಿಸಲಾಯಿತು.