ಶ್ರೀ ಧರ್ಮಸ್ಥಳ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆಯುತ್ತಿರುವ 224 ನೇ ವಿಶೇಷ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ಇದರ ಮುಖ್ಯ ನಿರ್ವಹಣಾಧಿಕಾರಿಗಳಾದ ಗೌರವಾನ್ವಿತ ಅನಿಲ್ ಕುಮಾರ್ ಎಸ್. ಎಸ್. ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರು ವಿವೇಕ್ ವಿ. ಪಾಯಸ್ ರವರು, ಜನಜಾಗೃತಿ ಆಡಳಿತಾತ್ಮಕ ಯೋಜನಾಧಿಕಾರಿಗಳಾದ ಶ್ರೀಯುತ ಮಾಧವ ರವರು, ಶಿಬಿರಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು.
