ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ
ಶ್ರೀ ಅಭಿಮನ್ಯು ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಬಾನಂಗಡ ಅರುಣ್ ಕುಮಾರ್, ಉಪಾಧ್ಯಕ್ಷರಾದ ಶ್ರೀ ಎ. ಟಿ. ರಾಮಸ್ವಾಮಿ, ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲೀಲಾವತಿ, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿಗಳಾದ ಶ್ರೀ ಜೈವಂತ್ ಪಟಗಾರ ಹಾಗೂ ತಾಲೂಕಿನ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತಿಯಿದ್ದರು.
