ಹಾಲುರಾಮೇಶ್ವರ ತಾಲೂಕಿನ ಎಸ್ ನಿಜಲಿಂಗಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚಣೆ ಕಾರ್ಯಕ್ರಮ

Janajagurthi Vedike News

ಹಾಲುರಾಮೇಶ್ವರ ತಾಲೂಕಿನ ಎಸ್ ನಿಜಲಿಂಗಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚಾರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಸಂತೋಷ್ ರವರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೋಮಶೇಖರ್ ರವರು ವಿಧ್ಯಾರ್ಥಿಗಳಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದರು. ಯೋಜನಾಧಿಕಾರಿಗಳು ವಿದ್ಯಾರ್ಥಿಗಳಿಗೆ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಉಪಸ್ಥಿತರಿದ್ದರು.