ಅಜ್ಜಂಪುರ ತಾಲೂಕಿನ ಅಜ್ಜಂಪುರ ವಲಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ
ಶ್ರೀ ಚಂದ್ರಪ್ಪ ಮತ್ತು ಕಾಲೇಜಿನ ಪ್ರಾಂಶುಪಾಲರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಾನ್ಯ ಯೋಜನಾಧಿಕಾರಿ ಯವರು ಯೋಜನೆಯ ಕಾರ್ಯಕ್ರಮದ ಬಗ್ಗೆ ವಿವರಿಸಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರಿಸಿದರು. ನಂತರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊಫೆಸರ್ ಆನಂದ್ ರವರು ಈಗಿನ ಯುವಪೀಳಿಗೆಯ ಜನರು ದುಶ್ಚಟಗಳಿಗೆ ದಾಸರಾಗುತ್ತಿರುವುದು ವಿಪರ್ಯಾಸ ಏಕಾಗ್ರಚಿತ್ತದಿಂದ ಇಂತಹ ದುಶ್ಚಟಗಳಿಗೆ ಮುಕ್ತಿ ಹಾಡಬಹುದು ಹಾಗೂ ತಂಬಾಕು ಸೇವನೆಯಿಂದ ಆ ವ್ಯಕ್ತಿ ಅನುಭವಿಸುವ ಹೀನಾಯ ಸ್ಥಿತಿಯ ಬಗ್ಗೆ ತಿಳಿಸಿದರು. ನಂತರ ಅಧ್ಯಕ್ಷತೆ ವಹಿಸಿದ್ದ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಎ. ಸಿ. ಚಂದ್ರಪ್ಪರವರು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡಿರುವ ಕೆಟ್ಟ ದುರಭ್ಯಾಸ ಹಾಗೂ ಇತರೆ ಕೆಟ್ಟ ಚಟಗಳನ್ನು ತ್ಯಜಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀಮತಿ ಕವಿತಾ, ಒಕ್ಕೂಟ ದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
