ಕೊಡಗು ಜಿಲ್ಲೆಯ ಕೊಡಗು ವಿಶ್ವವಿದ್ಯಾನಿಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Janajagurthi Vedike News

ಕೊಡಗು ಜಿಲ್ಲೆಯ ಕೊಡಗು ವಿಶ್ವವಿದ್ಯಾನಿಲಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಡಾ. ಸೀನಪ್ಪ ರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯಸ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಜಿಲ್ಲಾ ವೇದಿಕೆಯ ಅಧ್ಯಕ್ಷರಾದ ಶ್ರೀ ಅಭಿಮನ್ಯು ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲೀಲಾವತಿ, ವೇದಿಕೆ ಸದಸ್ಯರಾದ ಶ್ರೀ ಚಂದ್ರಮೋಹನ್, ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ಶ್ರೀ ರೋಹಿತ್, ಮೇಲ್ವಿಚಾರಕರು, ಉಪನ್ಯಾಸಕರ ತಂಡ, ಸೇವಾ ಪ್ರತಿನಿಧಿ, 150 ಕ್ಕೂ ಹೆಚ್ಚು ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.