ಹರಿಹರ ವಲಯದ ಭೀಮನಗರ ಕಾರ್ಯಕ್ಷೇತ್ರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಜಿಲ್ಲಾ ನಿರ್ದೇಶಕರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ದುಶ್ಚಟಗಳಿಂದ ಕುಟುಂಬದ ಮೇಲೆ ಆಗುವ ದುಷ್ಪರಿಣಾಮವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ಅದ್ಯಕ್ಷರಾದ ಬಾಬಣ್ಣ, ಸಂಪನ್ಮೂಲ ವ್ಯಕ್ತಿ ಶ್ವೇತಾ, ಈಶ್ವರ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ, ಒಕ್ಕೂಟ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
