ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಿನ್ಸಿಪಾಲ್ ಪ್ರಭಾಕರ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕಿಗಳಾಗಿ ಶಿರಸಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಕಾಳಿಂಗ ರಾಜ್ ರವರು ತಂಬಾಕು ಸೇವನೆಯಿಂದ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ, ಸ್ವಾಸ್ತ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರು, ಮೇಲ್ವಿಚಾರಕರು, ಸೇವಾಪ್ರತಿನಿಗಳು
ಉಪಸ್ಥಿತರಿದ್ದರು.
