ಹುನಗುಂದಲ್ಲಿ 1798 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯ ಹುನಗುಂದ ತಾಲ್ಲೂಕಿನ ಅಮೀನಗಡದಲ್ಲಿ 1798ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಶ್ರೀ ನಂಜಯ್ಯಮಠ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ಕೃಷ್ಣ ಟಿ., ದಿವ್ಯ ಸಾನಿಧ್ಯದಲ್ಲಿ ಶ್ರೀ ಶಂಕರ ರಾಜೇಂದ್ರ ಮಹಾಸ್ವಾಮಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಅಶೋಕ್ ಚಿಕ್ಕಗಡೆ, ಜನಜಾಗೃತಿ ವೇದಿಕೆ ಸದಸ್ಯರು, ತಾಲೂಕಿನ ಯೋಜನಾಧಿಕಾರಿ ಶ್ರೀ ಸಂತೋಷ್, ಕೊಪ್ಪಳ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಶ್ರೀ ನಾಗೇಶ್ ವೈ., ಶಿಬಿರಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಮತ್ತು ಶೌರ್ಯ ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.