ಧಾರವಾಡ ಪ್ರಾದೇಶಿಕ ವಿಭಾಗದ ಹಿರೇಕೆರೂರು ತಾಲೂಕಿನ ಹಂಸ ಬಾವಿಯಲ್ಲಿ ನಡೆದ 1802 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಡ್ಲೂರು ಮುರುಘಾ ಮಠದ ಶ್ರೀ ಮ.ನಿ.ಪ್ರ. ಮುರುಘರಾಜೇಂದ್ರ ಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು ಸರಕಾರ ಮಾಡದ ಉತ್ತಮ ಕಾರ್ಯಗಳನ್ನು ಪೂಜ್ಯರು ನಡೆಸಿಕೊಂಡು ಹೋಗುತ್ತಿದ್ದಾರೆ. ಪೂಜ್ಯರ ಸಾಧನೆಗಳು, ಅವರ ಪಾರದರ್ಶಕ ಬದುಕು, ಇಡೀ ಮಾನವ ಕುಲಕ್ಕೆ ಸ್ಫೂರ್ತಿ ಎಂದು ನುಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಜನಜಾಗೃತಿ ವೇದಿಕೆಯ ರಾಜ್ಯದ್ಯಕ್ಷರಾದ ಶ್ರೀ ರಾಜಣ್ಣ ಕೊರವಿ, ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುತ್ತಪ್ಪ ಬಾಸುರು, ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಬಸವರಾಜ ಮಲ್ಲಜ್ಜರ, ಕೌಶಬಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ಗೌಡ ಪಾಟೀಲ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀಯುತ ಕಲ್ಯಾಣಕುಮಾರ ಶೆಟ್ಟರ್, ಹಾವೇರಿ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಶಿವರಾಯ ಪ್ರಭು, ಹಿರಿಯ ವಕೀಲರಾದ ಪಿ. ವಿ. ಕೆರೂಡಿ, ಜನಜಾಗೃತಿ ಯೋಜನಾಧಿಕಾರಿ ಭಾಸ್ಕರ್ ಎನ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಮಂಜುನಾಥ ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.
