ಕಲಬುರಗಿ ಪ್ರಾದೇಶಿಕ ವಿಭಾಗದ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನಲ್ಲಿ ನಡೆದ 1806 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಲಬುರಗಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜಯಂತ ಪೂಜಾರಿ ರವರು ಕ್ಷೇತ್ರದ ಹಿನ್ನೆಲೆ, ಮದ್ಯವರ್ಜನ ಶಿಬಿರದಿಂದ ಆಗುವ ಪ್ರಯೋಜನ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು.
