ಹುಲಗೂರು ವಲಯದ ಖಾದರಲಿಂಗ ಪ್ರೌಢಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ

Janajagurthi Vedike News

ಹುಲಗೂರು ವಲಯದ ಖಾದರಲಿಂಗ ಪ್ರೌಢಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರವಾಡ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಭಾಸ್ಕರ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಭಾಸ್ಕರ್ ರವರು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳು, ತಂಬಾಕು ಸೇವನೆ ತಡೆಗಟ್ಟುವ ಬಗ್ಗೆ, ಮಧ್ಯಪಾನ, ಧೂಮಪಾನ, ಡ್ರಾಕ್ಸ್ ಮತ್ತು ದುಶ್ಚಟಗಳ ಬಗ್ಗೆ ಮಕ್ಕಳಿಗೆ ಮನ ಮುಟ್ಟುವಂತೆ ಸಮಗ್ರ ಮಾಹಿತಿ ನೀಡಿದರು. ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಉಮಾ ಎನ್. ಹೆಚ್. ರವರು ಮಾದಕ ವಸ್ತುಗಳಿಂದ ಆಗುವ ಪರಿಣಾಮ ಕುರಿತು ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಆಸ್ಪತ್ರೆಯ ಅಧಿಕಾರಿ ಶ್ರೀ ಚೆನ್ನಪ್ಪ ರವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಯರು, ಸಹ ಶಿಕ್ಷಕರು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.