ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಗರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಪ್ರಾಂಶುಪಾಲರು ಶ್ರೀ ಎಂ. ವಿ. ಕುಂಬಾರ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀ ವಿಜಯಕುಮಾರ ಎಂ., ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಶ್ರೀ ಉಮಾಶಂಕರ ಮುಪ್ಪಯ್ಯಾನವರ ಮಠ, ಸಂಪನ್ಮೂಲ ವ್ಯಕ್ತಿ ಡಾ. ಕಿರಣ ಮೂಡಲಗಿ, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಗೀತಾ ಹೊಸಮನಿ, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಸ್ತಾವಿಕವಾಗಿ ಮಾತನಾಡಿದ ಮಾನ್ಯ ಯೋಜನಾಧಿಕಾರಿಗಳು ಯೋಜನೆಯು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಹಲವು ಕಾರ್ಯಕ್ರಮ ಅನುಷ್ಠಾನ ಮಾಡಿದ್ದು ಅದರಲ್ಲೂ ಸಾಮಾಜಿಕ ಅಭಿವೃದ್ಧಿ ಮಾಡುವಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಯುವ ಜನತೆಗೆ ಆರೋಗ್ಯಯುತ ಮಾಹಿತಿ ನೀಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿ ಜೀವನದಲ್ಲಿ ಸ್ವಾಸ್ಥ್ಯ ಸೌಖ್ಯ ಕಾಪಾಡಿಕೊಂಡು ಸಮಾಜ ಕಟ್ಟುವಲ್ಲಿ ಸದಾ ಶ್ರಮಿಸುತ್ತಿರುವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಶ್ರೀ ಕಿರಣ್ ಮೂಡಲಗಿ ಮಾದಕ ವಸ್ತುಗಳಾದ ಗಾಂಜಾ, ಅಪೀಮು, ಹೆರಾಯಿನ್, ತಂಬಾಕು, ಮದ್ಯಪಾನ, ಧೂಮಪಾನ ಸೇವನೆ ಇಂತಹ ದುಶ್ಚಟಗಳಿಂದ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮದಲ್ಲಿ ಎಲ್ಲಾ ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರು ಬೋಧಿಸಿದರು. ಧರ್ಮಸ್ಥಳ ಯೋಜನೆ ಸಮಾಜದ ಎಲ್ಲ ಹಂತದಲ್ಲೂ ಕಾರ್ಯಕ್ರಮಗಳನ್ನು ಆಯೋಜಿಸಿ ಉತ್ತಮ ರಾಷ್ಟ್ರ ಸಮಾಜ ಕಟ್ಟುವಲ್ಲಿ ಬಹುಪಾಲು ಶ್ರಮ ಹಾಕಿದೆ ಎಂದು ತಿಳಿಸುವ ಮೂಲಕ ಅಧ್ಯಕ್ಷೀಯ ಭಾಷಣ ಮಾಡಿದರು.
