ಶ್ರೀ ಮಂಜುನಾಥೇಶ್ವರ ವ್ಯಸನ ಮುಕ್ತಿ ಹಾಗೂ ಸಂಶೋಧನ ಕೇಂದ್ರ ಜಾಗೃತಿ ಸೌಧದಲ್ಲಿ 227 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವು ಡಾ. ಮೋಹನ್ ದಾಸ್ ಗೌಡ, ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ, ಉಡುಪಿ ಪ್ರಾದೇಶಿಕ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ರವರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತ್ತು. ಈ ಸಂದರ್ಭದಲ್ಲಿ ತೀರ್ಥಹಳ್ಳಿ ಛಲಗಾರ ಪತ್ರಿಕೆಯ ವರದಿಗಾರರಾದ ಶ್ರೀ ಶ್ರೀ ಶಿವಣ್ಣ ತುಪ್ಪದ ಮನೆ, ಬೆಂಗಳೂರು ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ನರಸಿಂಹಮೂರ್ತಿ, ಜಾಗೃತಿ ಸೌಧದ ಪ್ರಬಂಧಕರಾದ ಶ್ರೀ ಕಿಶೋರ್, ನವಜೀವನ ಸಮಿತಿ ಸದಸ್ಯರು ಹಾಗೂ ಆರೋಗ್ಯ ಸಹಾಯಕರು ಉಪಸಿತರಿದ್ದರು.
