ಕಲಘಟಗಿ ತಾಲೂಕಿನಲ್ಲಿ ನಡೆದ 1913 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಜಿಲ್ಲಾ ವ್ಯಾಪ್ತಿಯ ಕಲಘಟಗಿ ತಾಲೂಕಿನ ಕಲಘಟಗಿ ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ 1813 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಪೂಜ್ಯ ಬಾಲ ತಪಸ್ವಿ ಶ್ರೀ ಷ. ಬ್ರ. ರೇವಣಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಪ್ರಭಾಕರ್ ನಾಯ್ಕ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಶ್ರೀ ಪ್ರಶಾಂತ, ಶಿಬಿರಾಧಿಕಾರಿ ಶ್ರೀ ದಿನೇಶ್ ಮರಾಠಿ, ಆರೋಗ್ಯ ಸಹಾಯಕರಾದ ಶ್ರೀ ವೆಂಕಟೇಶ, ಜನಜಾಗೃತಿ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಸದಸ್ಯರು, ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರು, ಜನಜಾಗೃತಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ನವಜೀವನ ಸದಸ್ಯರು ಉಪಸ್ಥಿತರಿದ್ದರು.