ಪರಮಪೂಜ್ಯ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1819 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಶಿಡ್ಲಘಟ್ಟ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಶಿಡ್ಲಘಟ್ಟ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಬಳ್ಳಾಪುರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1819 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಕೆಂಪಣ್ಣ ಸ್ವಾಮಿ ವೀರಣ್ಣ ಸ್ವಾಮಿ ಸಭಾ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ತಿಮ್ಮಯ್ಯ ನಾಯ್ಕ ರವರು ಜನಜಾಗೃತಿ ವೇದಿಕೆಯ ಹುಟ್ಟು ಮತ್ತು ಬೆಳವಣಿಗೆ ಬಗ್ಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1819 ನೇ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ಹಾಜರಿದ್ದ ಗಣ್ಯ ಮಾನ್ಯರುಗಳು ದೀಪ ಪ್ರಜ್ವಲಿಸುವ ಮೂಲಕ 1819 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರಶಾಂತ್ ಸಿ. ಎಸ್. ರವರು ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಮುಖ್ಯ ಅತಿಥಿಗಳ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶ್ರೀ ಎಂ. ರಾಜಣ್ಣ ಮಾಜಿ ಶಾಸಕರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ, ಶ್ರೀ ರಾಜೀವ್ ಗೌಡ ಎ.ಬಿ.ಡಿ ಟ್ರಸ್ಟ್ ಮಾಲೀಕರು ಶಿಡ್ಲಘಟ್ಟ, ಶ್ರೀ ಶ್ರೀನಿವಾಸ್ ರಾಮಯ್ಯ ನಿರ್ದೇಶಕರು ಕೆ.ಎಂ.ಎಫ್ ಬೆಂಗಳೂರು, ಶ್ರೀ ಡಾ| ವೆಂಕಟೇಶ್ ಮೂರ್ತಿ ಎಂ. ತಾಲೂಕು ಆರೋಗ್ಯ ಅಧಿಕಾರಿಗಳು ಶಿಡ್ಲಘಟ್ಟ, ಶ್ರೀ ತ್ಯಾಗರಾಜ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಚಿಕ್ಕಬಳ್ಳಾಪುರ, ಶ್ರೀ ಹೇಮಂತ್ ಕುಮಾರ್ ಜೆಸಿಬಿ ಮಾಲೀಕರು, ಶಿಬಿರಾಧಿಕಾರಿ ಶ್ರೀ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಹಾಯಕಿ ಶ್ರೀಮತಿ ಪ್ರೆಸಿಲ್ಲಾ ಡಿ’ಸೋಜಾ, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ದರ್ಶನ್ ಎಂ. ಎಸ್. ,ಶಿಡ್ಲಘಟ್ಟ ಯೋಜನಾ ಕಛೇರಿ ವ್ಯಾಪ್ತಿಯ ಮೇಲ್ವಿಚಾರಕರು, ಆಂತರಿಕ ಲೆಕ್ಕ ಪರಿಶೋಧಕರು, ಕೃಷಿ ಮೇಲ್ವಿಚಾರಕರು, ಹಣಕಾಸು ಪ್ರಬಂಧಕರು, ಆಡಳಿತ ಸಹಾಯಕ ಪ್ರಬಂಧಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
