227 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಜಾಗೃತಿ ಸೌಧದಲ್ಲಿ ನಡೆದ 227 ನೇ ವಿಶೇಷ ಮದ್ಯವರ್ಜನ ಶಿಬಿರದ ಕುಟುಂಬ ದಿನ ಹಾಗೂ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಸಂಸ್ಥೆಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗೌರವಾನ್ವಿತ ಡಾ. ಎಲ್. ಎಚ್. ಮಂಜುನಾಥ್ ರವರು ನೆರವೇರಿಸಿ ಮಾರ್ಗದರ್ಶನ ನೀಡಿದರು. ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಗೌರವಾನ್ವಿತ ಶ್ರೀ ಅನಿಲ್ ಕುಮಾರ್ ಎಸ್. ಎಸ್. ರವರು ಮಾಹಿತಿ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾಯ್ಸ್ ರವರು ಕುಟುಂಬ ದಿನ ನೆರವೇರಿಸಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಆಡಳಿತಾತ್ಮಕ ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ, ಶಿಬಿರಾಧಿಕಾರಿ ಶ್ರೀ ನಾಗೇಂದ್ರ, ಆರೋಗ್ಯ ಸಹಾಯಕರಾದ ಶ್ರೀಮತಿ ಸೌಮ್ಯ, 86 ಮಂದಿ ಶಿಬಿರಾರ್ಥಿಗಳು, ಅವರ ಕುಟುಂಬಸ್ಥರು ಹಾಗೂ ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.