ತಮಕೂರು 1 ತಾಲೂಕಿನ ಶ್ರೀ ಗಣಪತಿ ಕಲ್ಯಾಣ ಮಂಟಪ ಬೀಮಸಂದ್ರದಲ್ಲಿ 1833 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1833 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ತುಮಕೂರು ಗ್ರಾಮಾಂತರ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತುಮಕೂರು ಗ್ರಾಮಾಂತರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು-1 ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ 1833 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಶ್ರೀ ಗಣಪತಿ ಕಲ್ಯಾಣ ಮಂಟಪ ಬೀಮಸಂದ್ರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ 1833 ನೇ ಶಿಬಿರದ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ವಹಿಸಿದ್ದ ಶ್ರೀ ಶ್ರೀ ಶ್ರೀ ಕಾರದ ವೀರಬಸವ ಮಹಾ ಸ್ವಾಮಿಜಿಗಳು ಕಾರದೇಶ್ವರ ಮಠ ಬೆಳ್ಳಾವಿ ಹಾಗೂ ವೇದಿಕೆಯಲ್ಲಿ ಹಾಜರಿದ್ದ ಗಣ್ಯ ಮಾನ್ಯರುಗಳು ದೀಪ ಪ್ರಜ್ವಲಿಸುವ ಮೂಲಕ 1833 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ತುಮಕೂರು-1 ಜಿಲ್ಲೆಯ ಮಾನ್ಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಸುವರ್ಣ ರವರು ಜನಜಾಗೃತಿ ವೇದಿಕೆಯಿಂದ ನಡೆಸಿಕೊಡುವ ಕಾರ್ಯಕ್ರಮಗಳ ಕುರಿತು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಮುಖ್ಯ ಅತಿಥಿಗಳ ನುಡಿಗಳನ್ನು ನುಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ, ಸದಸ್ಯರುಗಳಾದ ಶ್ರೀಮತಿ ವಿಜಯ ಭಾಸ್ಕರ್, ಶ್ರೀ ಲೋಕೇಶ್, ಶ್ರೀ ಶಿವಕುಮಾರ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಚಿ.ನಿ. ಪುರುಷೋತ್ತಮ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಕೆ ನುಡಿಗಳನ್ನು ನುಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದ ಶ್ರೀ.ಮ.ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಕಾರದ ವೀರಬಸವ ಮಹಾಸ್ವಾಮಿಜಿಗಳು ಕಾರದೇಶ್ವರ ಮಠ ಬಳಳಾವಿ ಶ್ರೀಗಳವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹೆಗ್ಗಡೆಯವರು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಸಮಾಜಕ್ಕೆ ಕೊಡುಗೆಗಳಾಗಿ ನೀಡುವ ಮೂಲಕ ಅತ್ಯಂತ ಬಹಳ ಪುಣ್ಯದ ಕಾರ್ಯದಲ್ಲಿ ಧರ್ಮಸ್ಥಳದ ಶ್ರೀ ಹೆಗ್ಗಡೆಯವರು ತೊಡಗಿಕೊಂಡಿರುವುದು ಸಂತೋಷದ ವಿಷಯವಾಗಿದ್ದು ಜನಜಾಗೃತಿ ವೇದಿಕೆಯ ಮುಖೇನ ನಡೆಸುವ ಮದ್ಯವರ್ಜನ ಶಿಬಿರದ ಮೂಲಕ ಹಲವಾರು ಕುಟುಂಬದ ನೆಮ್ಮದಿಗೆ ಕರಣೀಬೂತರಾಗಿದ್ದಾರೆಂದು ತಿಳಿಸುವ ಮೂಲಕ ಶುಭ ಆಶೀರ್ವಚನವನ್ನು ನೀಡಿದರು. 1833 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ವೇ ಬಸವರಾಧ್ಯ ಬಿ.ಜಿ. ರವರು ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ದಿನೇಶ್ ಮರಾಠಿ, ಆರೋಗ್ಯ ಸಹಾಯಕ ಶ್ರೀ ವೆಂಕಟೇಶ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ದರ್ಶನ್ ಎಂ. ಎಸ್., ತುಮಕೂರು ಗ್ರಾಮಾಂತರ ಯೋಜನಾ ಕಛೇರಿ ವ್ಯಾಪ್ತಿಯ ಮೇಲ್ವಿಚಾರಕರು, ಆಂತರಿಕ ಲೆಕ್ಕ ಪರಿಶೋಧಕರು, ಕೃಷಿ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.