ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ 1 ಜಿಲ್ಲಾ ವ್ಯಾಪ್ತಿಯ ಕಿತ್ತೂರು ತಾಲೂಕಿನಲ್ಲಿ 1835 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಮಾನ್ಯ ಶಾಸಕರು ಶ್ರೀ ಬಾಬಾ ಸಾಹೇಬ ಪಾಟೀಲ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಧಾರವಾಡ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀಯುತ ಭಾಸ್ಕರ್ ಏನ್. ರವರು ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮಡಿವಾಳ ರಾಜ ಯೋಗಿಂದ್ರ ಮಹಾ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರು, ಜನಜಾಗೃತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳು, ಜನಜಾಗೃತಿ ಮೇಲ್ವಿಚಾರಕರು, ಆರೋಗ್ಯ ಕಾರ್ಯಕರ್ತರು, ವಲಯದ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಶಿಬಿರಾರ್ಥಿಗಳು ಹಾಗೂ ಅವರ ಕುಟುಂಬದವರು ಉಪಸ್ಥಿತರಿದ್ದರು.
