ಧಾರವಾಡ ಪ್ರಾದೇಶಿಕ ವಿಭಾಗದ ಕಿತ್ತೂರು ತಾಲೂಕಿನಲ್ಲಿ ನಡೆದ 1835 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಧಾರವಾಡ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್ ಏನ್. ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀಯುತ ರಾಜಣ್ಣ ಮೂ. ಕೊರವಿ ರವರು ಶಿಬಿರಾರ್ಥಿಗಳಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಶುಭ ಹಾರೈಸಿದರು.
