ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದ 1838 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದ 1838 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವರು, ಶಾಸಕರು ಶ್ರೀ ಆರಗ ಜ್ಞಾನೇಂದ್ರ ರವರು ಆಗಮಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿ ಯೋಜನೆಯ ಕಾರ್ಯಕ್ರಮಗಳು, ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರು ಶ್ರೀ ರಾಜಣ್ಣ ಮು. ಕೊರವಿ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ. ಪಾಯಸ್, ಜಿಲ್ಲಾಧ್ಯಕ್ಷರು ರಾಘವೇಂದ್ರ ಸೊಪ್ಪುಗುಡ್ಡೆ, ಗೌರವಾಧ್ಯಕ್ಷರು ಶ್ರೀ ಜೀವೆಂದರ್ ಜೈನ್, ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ಬಿ., ಜಿಲ್ಲಾ ವೇದಿಕೆ ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.