ಕೊಟ್ಟೂರಿನಲ್ಲಿ 1841 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಕೊಪ್ಪಳ ಪ್ರಾದೇಶಿಕ ವಿಭಾಗದ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ 1841 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಕೊರವಿ ರವರು ನವಜೀವನಕ್ಕೆ ಕಾಲಿಟ್ಟ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮೈದೂರು ಶಿವಣ್ಣ, ಉಪಾಧ್ಯಕ್ಷರಾದ ಶ್ರೀ ವಿವೇಕಾನಂದ ಮತ್ತು ಸದಸ್ಯರು, ವಿಜಯನಗರ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಕಾವಲಿ ಶಿವಪ್ಪ ನಾಯಕ, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ನಟರಾಜ ಬಾದಾಮಿ, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಆರಕ್ಷಕ ಇಲಾಖೆಯ ವೃತ್ತ ನಿರೀಕ್ಷಕರಾದ ಶ್ರೀ ಸಿ. ವೆಂಕಟಸ್ವಾಮಿ, ತಾಲೂಕಿನ ಯೋಜನಾಧಿಕಾರಿ ಶ್ರೀ ನವೀನ್ ಕುಮಾರ್ ಎಚ್. ಡಿ., ಕಲ್ಯಾಣ ಮಂಟಪದ ಮಾಲೀಕರಾದ ಶ್ರೀ ಜಡಿತಲಿ ಕೊಟ್ರೇಶ್ ಉಪಸ್ಥಿತರಿದ್ದರು.