ಉಡುಪಿ ಪ್ರಾದೇಶಿಕ ವಿಭಾಗ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ವಲಯದ ಶ್ರೀ ಮಹಾಲಸ ಸಿದ್ಧಿವಿನಾಯಕ ದೇವಸ್ಥಾನದ ಸಭಾಭವನ ಮಾದನಗೇರಿಯಲ್ಲಿ 1845 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸೂರಜ್ ನಾಯ್ಕ ಸೋನಿ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರು, ಶ್ರೀ ಮಹೇಶ್ ಬಿ. ನಾಯಕ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಉತ್ತರ ಕನ್ನಡ-2, ಶ್ರೀ ಮಹೇಶ್ ಎಂ. ಡಿ. ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತರ ಕನ್ನಡ, ಶ್ರೀ ವಾಸುದೇವ್ ಎನ್. ನಾಯಕ್ ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರು ಹಾಗೂ ಸಮಿತಿ ಅಧ್ಯಕ್ಷರು, ಶ್ರೀ ನಾಗರಾಜ್ ನಾಯಕ್ ಗ್ರಾಮ ಪಂಚಾಯತ್ ಸದಸ್ಯರು ಬರ್ಗಿ, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿಗಳು ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ, ಶ್ರೀ ಕಲ್ಮೇಶ್ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಮಟಾ ತಾಲೂಕು, ಶ್ರೀ ಸತೀಶ್ ಶೇಟ್ ಮಾಜಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಉತ್ತರ ಕನ್ನಡ ಹಾಗೂ ಗಣ್ಯ ಮಾನ್ಯರ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
