ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ ಯರಗಟ್ಟಿ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಯರಗಟ್ಟಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳಗಾವಿ – 2 ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಟಕೋಳ ವಲಯ, ನವಜೀವನ ಸಮಿತಿ ಯರಗಟ್ಟಿ ತಾಲೂಕು, ಗ್ರಾಮ ಪಂಚಾಯಿತಿ ಕಟಕೋಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕಟಕೋಳ, ಆರಕ್ಷಕ ಠಾಣೆ ಕಟಕೋಳ, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳು ಇವರುಗಳ ಸಹಕಾರದೊಂದಿಗೆ 1843 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭವು ಬಿ.ಎನ್ ಅಡ್ಡಣಗಿ ಸಭಾಭವನ ದೇಸಾಯಿ ನಗರ ಕಟಕೋಳದಲ್ಲಿ ಸಂಪನ್ನಗೊಂಡಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಪ್ರ.ಸ್ವ ಸಚ್ಚಿದಾನಂದ ಮಹಾಸ್ವಾಮಿಗಳು ಕುಮಾರೇಶ್ವರ ವಿರಕ್ತಮಠ ಕಟಕೋಳ ಇವರು ವಹಿಸಿ ಆಶೀರ್ವಚನವನ್ನು ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಕ್ಷೇತ್ರದ ನಿಧಿಯನ್ನು ಸ್ವಂತಕ್ಕಾಗಿ ಉಪಯೋಗ ಮಾಡದೆ ಸಮಾಜದ ಅಭಿವೃದ್ಧಿಗಾಗಿ ದಾನ ಮಾಡುವ ಈ ಜಗತ್ತು ಕಂಡ ಸರ್ವ ಶ್ರೇಷ್ಠ ಧಾರ್ಮಿಕ ನಾಯಕ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಎಂದರು. ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಮೇಶ್ ಕಾಡೇಶನವರ ಅಧ್ಯಕ್ಷರು 1843 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ ಇವರು ವಹಿಸಿ ಕಟಕೋಳ ಗ್ರಾಮದಲ್ಲಿ ನಡೆದ ಮದ್ಯವರ್ಜನ ಶಿಬಿರ ಮಾದರಿ ಮತ್ತು ಇತಿಹಾಸ ಭರಿತ ಕಾರ್ಯಕ್ರಮ. ಇವತ್ತಿನ ಕಾರ್ಯಕ್ರಮವನ್ನು ಪ್ರೇರಣೆಯಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಇಡೀ ನಮ್ಮ ಕಟಕೋಳ ಗ್ರಾಮವನ್ನು ಪಾನಮುಕ್ತ ಗ್ರಾಮವನ್ನಾಗಿ ಮಾಡಲು ನಾವೆಲ್ಲರು ಪ್ರಯತ್ನ ಮಾಡೋಣ ಎಂದರು. ಶ್ರೀ ಭಾಸ್ಕರ್
ಎನ್. ಪ್ರಾದೇಶಿಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಧಾರವಾಡ ಇವರು ಕುಟುಂಬ ದಿನದ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಹೆಚ್. ಆರ್. ಲವಕುಮಾರ್ ಗೌರವಾನ್ವಿತ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೆಳಗಾವಿ – 2 ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬಿ. ಎ. ದೇಸಾಯಿ ಮಾಜಿ ಉಪಾಧ್ಯಕ್ಷರು ಗ್ರಾಮ ಪಂಚಾಯಿತಿ ಕಟಕೋಳ, ಶ್ರೀ ಮಹಾಂತೇಶ ಕುಂಬಾರ ಗೌರವಾಧ್ಯಕ್ಷರು ಸಲಹಾ ಸಮಿತಿ, ಶ್ರೀ ಈರನಗೌಡ ಪಾಟೀಲ ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ – 2 ಜಿಲ್ಲೆ, ಶ್ರೀ ಅಶೋಕ ಕುಲಗೋಡ ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ – 2 ಜಿಲ್ಲೆ, ಶ್ರೀ ಮಹಾಂತೇಶ ದ. ಅಳಾಜಿ ನಿಕಟಪೂರ್ವ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ – 2 ಜಿಲ್ಲೆ, ಶ್ರೀ ಸುಭಾಸ ಹನಸಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ – 2 ಜಿಲ್ಲೆ, ಶ್ರೀ ಮಾರುತಿ ಗರಡಿಮನಿ ಉಪಾಧ್ಯಕ್ಷರು 1843 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ, ಶ್ರೀಮತಿ ಮಲ್ಲವ್ವ ಆಲದಕಟ್ಟಿ ಉಪಾಧ್ಯಕ್ಷರು 1843 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ, ಶ್ರೀ ರಾಜು ಕುಲಕರ್ಣಿ ಉಪಾಧ್ಯಕ್ಷರು 1843 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ, ಶ್ರೀ ಮಹೇಶ್ ದುಗಾಣಿ ಕೋಶಾಧಿಕಾರಿ 1843 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕಟಕೋಳ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಮತ್ತು ಕುಮಾರಿ ರಂಜಿತಾ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ಶ್ರೀ ನಾಗೇಂದ್ರ ಎಂ. ಜೊತೆ ಕಾರ್ಯದರ್ಶಿ/ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಟಕೋಳ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ವಿ.ಎಲ್.ಈ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು, ಪತ್ರಿಕಾ ಮಾಧ್ಯಮದವರು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
