ಕೊಪ್ಪಳ ಪ್ರಾದೇಶಿಕ ವಿಭಾಗದ ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯ್ಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು, ಶಿಕ್ಷಕರು, ಸಾಹಿತಿಗಳು, ಸಮಾಜಮುಖಿ ಚಿಂತನೆ ನಡೆಸುವ ಗಣ್ಯರು ತರಬೇತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ಸಂದಿಮನಿ, ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಶ್ರೀ ರವೀಂದ್ರ ಒಂದ ಕುದುರಿ, ಉಪಾಧ್ಯಕ್ಷರಾದ ಶ್ರೀ ವೆಂಕಪ್ಪ ಮುಳ್ಳೂರು, ಜಿಲ್ಲಾ ನಿರ್ದೇಶಕರಾದ ಶ್ರೀ ಚನ್ನಕೇಶವ, ಜಿಲ್ಲಾ ಜನಜಾಗೃತಿ ವೇದಿಕೆ ಸಮಸ್ತ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
