ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 231 ನೇ ವಿಶೇಷ ಮದ್ಯವರ್ಜನ ಶಿಬಿರ(1849 ನೇ ರಾಜ್ಯ ಮಟ್ಟದ ಶಿಬಿರ) ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಬಿರದ ವೈದ್ಯಾಧಿಕಾರಿ ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತ ವೈದ್ಯರಾದ ಡಾ. ಶ್ರೀ ಮೋಹನದಾಸ ಗೌಡ ರವರು ನೆರವೇರಿಸಿದರು. ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ ಮತ್ತು ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಶ್ರೀ ಮಾಧವ ಗೌಡ ಆಡಳಿತಾತ್ಮಕ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ, ಶ್ರೀ ಕಿಶೋರ್ ಪ್ರಬಂಧಕರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ಶಿಬಿರಾಧಿಕಾರಿಗಳಾದ ಶ್ರೀ ವಿದ್ಯಾಧರ್, ಶ್ರೀ ನಂದಕುಮಾರ್ ಪಿ. ಪಿ., ಶ್ರೀ ದೇವಿಪ್ರಸಾದ್ ಸುವರ್ಣ, ಶ್ರೀ ನಾಗೇಂದ್ರ, ಶ್ರೀ ಚಿತ್ತರಂಜನ್, ಆರೋಗ್ಯ ಸಹಾಯಕಿಯರಾದ ಶ್ರೀಮತಿ ಫಿಲೋಮಿನಾ ಡಿ’ಸೋಜ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ನೇತ್ರಾವತಿ, ಶ್ರೀಮತಿ ಸೌಮ್ಯ, ಕುಮಾರಿ ರಂಜಿತ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ವಿಶೇಷ ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳು ಕಾರ್ಯಕ್ರಮದ ಕೇಂದ್ರ ಬಿಂದುಗಳಾಗಿ ಭಾಗವಹಿಸಿದ್ದರು. ನವಜೀವನ ಸಮಿತಿಯ ಸದಸ್ಯರುಗಳು ತಮ್ಮ ವೈಯಕ್ತಿಕ ಪರಿಚಯದೊಂದಿಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಶೋಧನಾ ಕೇಂದ್ರದ ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
