ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತುಮಕೂರು 2 ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಪ್ರಾದೇಶಿಕ ಕಛೇರಿ ಬೆಳ್ತಂಗಡಿ, ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಶಿರಾ-1 ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತುಮಕೂರು 2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಮಾನ್ಯ ಶ್ರೀ ದಿನೇಶ್ ಡಿ. ರವರು ಹೊಸದಾಗಿ ಆಯ್ಕೆಯಾದ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಪರಿಚಯವನ್ನು ಮಾಡಿದರು ಮತ್ತು ಗತ ಸಭೆಯ ವರದಿಯನ್ನು ಮಂಡಿಸಿದರು. ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಸವಿವರವಾಗಿ ತಿಳಿಸುವ ಮೂಲಕ ಪ್ರಸ್ತಾವಿಕ ಮಾಹಿತಿಯನ್ನು ನೀಡಿದರು. 2024-25 ನೇ ಕ್ರಿಯಾ ಯೋಜನೆಯ ಅನುಷ್ಠಾನದ ಬಗ್ಗೆ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು ತಿಳಿಸಿದರು ಸಭೆಯಲ್ಲಿ 2024-25 ನೇ ಕ್ರಿಯಾ ಯೋಜನೆಯ ಪ್ರಮುಖ ಅಂಶಗಳು ಪಾರದರ್ಶಕ ಮದ್ಯವರ್ಜನ ಶಿಬಿರವನ್ನು ನಡೆಸುವ ಕುರಿತು, ಜನಜಾಗೃತಿ ವೇದಿಕೆ ಕಾರ್ಯಕ್ರಮಗಳ ಗುರಿ-ಸಾಧನೆ ಕುರಿತು, ಮದ್ಯವರ್ಜನ ಶಿಬಿರಗಳಲ್ಲಿ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವ ಕುರಿತು, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಿಂಗಳ ಕೊನೆಯೊಳಗೆ ಸಂಪೂರ್ಣವಾಗಿ ನಡೆಸುವ ಕುರಿತು, ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದ ಅಂಗವಾಗಿ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಕುರಿತು, ವಲಯಕ್ಕೆ ಒಂದರಂತೆ ನವ ಜೀವನ ಸಮಿತಿ ರಚನೆಯ ಕುರಿತು, ತಾಲೂಕಿಗೆ ಎರಡು ನವಜೀವನೋತ್ಸವ ಕಾರ್ಯಕ್ರಮ ನಡೆಸುವ ಕುರಿತು, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳಿಗೆ ಗುರುತಿನ ಚೀಟಿಯನ್ನು ನೀಡುವ ಕುರಿತು, ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿಯ ನಡೆಸುವ ಕುರಿತು, ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅನುದಾನವನ್ನು ಬಳಕೆ ಮಾಡುವ ಕುರಿತು ಮತ್ತು ಇತರ ವಿಷಯಗಳನ್ನು ಚರ್ಚಿಸಿ ನಿರ್ಣಯಿಸಲಾಯಿತು. ಅಕ್ಟೋಬರ್ 04 ರಂದು ಗಾಂಧೀ ಜಯಂತಿ ಕಾರ್ಯಕ್ರಮವನ್ನು ಮಧುಗಿರಿ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಡೆಸಲಾಗುವುದೆಂದು ಚರ್ಚಿಸಿ ತೀರ್ಮಾನಿಸಿ ನಿರ್ಣಯಿಸಲಾಯಿತು. ಕಾರ್ಯಕ್ರಮಲ್ಲಿ ತುಮಕೂರು 2 ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ತುಮಕೂರು 2 ಜಿಲ್ಲಾ ವ್ಯಾಪ್ತಿಯ ಯೋಜನಾಧಿಕಾರಿಗಳಾದ ಶ್ರೀ ದಿನೇಶ್ ಕುಮಾರ್, ಶ್ರೀ ಮಹೇಶ್, ಶ್ರೀಮತಿ ಅನಿತಾ ಜಿ. ಬೆಳಗಾಂವಕರ, ಶ್ರೀ ರಮೇಶ್, ಶ್ರೀ ರಾಮಚಂದ್ರ ಡಿ., ಶ್ರೀ ಶಶಿಧರ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಮೇಲ್ವಿಚಾರಕ ದರ್ಶನ್ ಎಂ. ಎಸ್., ತುಮಕೂರು 2 ಜಿಲ್ಲಾ ಆಡಿಟ್ ಪ್ರಬಂಧಕರಾದ ಶ್ರೀ ಚಂದ್ರಶೇಖರ್, ತುಮಕೂರು 2 ಜಿಲ್ಲಾ ಕಛೇರಿ ವ್ಯಾಪ್ತಿಯ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪಡೆದ ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.