ಧಾರವಾಡ ಪ್ರಾದೇಶಿಕ ವಿಭಾಗದ ಧಾರವಾಡ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಜಿಲ್ಲಾ ಕಛೇರಿ ಧಾರವಾಡದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಸಂತೋಷ್ ಆರ್. ಶೆಟ್ಟಿ ರವರು ವಹಿಸಿದರು. ಸಭೆಯ ಉದ್ಘಾಟನೆ ಮಾಡಿ ನಂತರ ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಚರ್ಚಿಸಲಾಯಿತು. ಹಳಿಯಾಳ ಮತ್ತು ದಾಂಡೇಲಿಯಲ್ಲಿ ಹೊಸದಾಗಿ ಪದಾಧಿಕಾರಿಗಳ ಆಯ್ಕೆ ಮಾಡುವ ಬಗ್ಗೆ ನಿರ್ಣಯಿಸಲಾಯಿತು. ಧಾರವಾಡ ಗ್ರಾಮಾಂತರ ತಾಲೂಕಿನಲ್ಲಿ ಮದ್ಯವರ್ಜನ ಶಿಬಿರ ನಡೆಯಲಿದ್ದು ಪ್ರತಿಯೊಬ್ಬರು ಸಹಕಾರ ನೀಡುವಂತೆ ನಿರ್ಣಯಿಸಲಾಯಿತು. ಅಕ್ಟೋಬರ್ 2 ರ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಈ ಬಾರಿ ಕಲಘಟಗಿ ತಾಲೂಕಿನಲ್ಲಿ ಮಾಡಲು ನಿರ್ಣಯಿಸಲಾಯಿತು. ನೂತನ ಪದಾಧಿಕಾರಿಗಳ ಆಯ್ಕೆ ಬಗ್ಗೆ ವಿಮರ್ಶೆ ಮಾಡಿ ನೂತನವಾಗಿ ಅಧ್ಯಕ್ಷರನ್ನಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಹಿರಿಯ ಸದಸ್ಯರಾದ ಶ್ರೀ ವಸಂತ್ ಅರ್ಕಚಾರಿ ರವರನ್ನು ಸರ್ವಾನುಮತದಿಂದ ಮತ್ತು ಉಪಾಧ್ಯಕ್ಷರಾಗಿ ಶ್ರೀ ಶಂಕರ್ ಮುಂಗರವಾಡಿ ಇವರನ್ನು ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ ನಿರ್ಣಯಿಸಲಾಯಿತು. ಈ ಸಂದರ್ಭ ಪ್ರಶಸ್ತಿ ಪುರಸ್ಕೃತರಾದ ಶ್ರೀ ಸಂತೋಷ್ ಆರ್. ಶೆಟ್ಟಿ, ಶ್ರೀ ರಮೇಶ್ ಮಹದೇವಪ್ಪನವರ ಮತ್ತು ಸವಿತಾ ಅಮರ್ ಶೆಟ್ಟಿ ರವರನ್ನು ಗುರುತಿಸಲಾಯಿತು. ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಶೆಟ್ಟಿ, ಯೋಜನಾಧಿಕಾರಿಗಳಾದ ಶ್ರೀ ಭಾಸ್ಕರ್, ಜಿಲ್ಲಾ ಜಾಗೃತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಮತ್ತು ತಾಲೂಕಿನ ಯೋಜನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
