ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಹೊನ್ನಾಳಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪೊಲೀಸ್ ಠಾಣೆ ಹೊನ್ನಾಳಿ – ನ್ಯಾಮತಿ, ಆರೋಗ್ಯ ಕೇಂದ್ರ ಹೊನ್ನಾಳಿ – ನ್ಯಾಮತಿ, ಗ್ರಾಮ ಪಂಚಾಯತ್ ಕತ್ತಿಗೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹೊನ್ನಾಳಿ ವಲಯ, ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಜರುಗುವ 1862 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಹೊನ್ನಾಳಿ ತಾಲೂಕಿನ ಶ್ರೀ ತಿರುಮಲ ಸಮುದಾಯ ಭವನ ಮಾದೇನಹಳ್ಳಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ಡಿ. ಜಿ. ಶಾಂತನಗೌಡ್ರು ಶಾಸಕರು ವಿಧಾನಸಭಾ ಕ್ಷೇತ್ರ ಹೊನ್ನಾಳಿ – ನ್ಯಾಮತಿ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು. ಶ್ರೀ ಕೆ.ಇ. ನಾಗರಾಜಪ್ಪ ಅಧ್ಯಕ್ಷರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮಣ್ ಮಾನ್ಯ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ದಾವಣಗೆರೆ ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಶ್ರೀ ಹೊಸಕೇರಿ ಸುರೇಶ್ ಸ್ಥಾಪಕಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಾವಣಗೆರೆ ಜಿಲ್ಲೆ ಇವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಎಸ್. ಮಲ್ಲೇಶಪ್ಪ ಗೌರವಾಧ್ಯಕ್ಷರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ, ಶ್ರೀ ಕೆ. ಬಸವರಾಜಪ್ಪ ನಿವೃತ್ತ ಶಿಕ್ಷಕರು ಮಾದೇನಹಳ್ಳಿ, ಶ್ರೀ ರುದ್ರಪ್ಪ ಸನ್ನೇರ ಅಧ್ಯಕ್ಷರು ಹಾಲು ಉತ್ಪಾದಕ ಸಹಕಾರ ಸಂಘ ಮಾದೇನಹಳ್ಳಿ, ಶ್ರೀ ಮಾಳಗಿ ಈಶ್ವರಪ್ಪ ಅಧ್ಯಕ್ಷರು ಶ್ರೀ ಬಸವೇಶ್ವರ ಟ್ರಸ್ಟ್ ಕಮಿಟಿ ಮಾದೇನಹಳ್ಳಿ, ಶ್ರೀ ನಾಗರಾಜ ಕತ್ತಿಗೆ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಬಿ. ಎಲ್ ಕುಮಾರಸ್ವಾಮಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಲಿಂಗರಾಜ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ರುದ್ರೇಶಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ನಟರಾಜ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಶ್ರೀನಿವಾಸ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಮಂಜುನಾಥ ಸರಳಿಮನೆ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಸಿದ್ದಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ರಮೇಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ಯೋಗೇಶ್ ಜಿ. ಬಿ. ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ವಿರೂಪಾಕ್ಷಪ್ಪ ಊರಿನ ಗಣ್ಯರು ಕತ್ತಿಗೆ, ಶ್ರೀ ಪಿ. ಬಸವರಾಜಪ್ಪ ಉಪಾಧ್ಯಕ್ಷರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ, ಶ್ರೀ ಎಂ. ಪಾಲಾಕ್ಷಪ್ಪ ಉಪಾಧ್ಯಕ್ಷರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ, ಶ್ರೀ ಎಂ.ರಾಜಪ್ಪ ಉಪಾಧ್ಯಕ್ಷರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ, ಶ್ರೀ ಹೆಚ್. ಬಿ. ಲೋಕೇಶಪ್ಪ ಗೌರವ ಸಲಹೆಗಾರರು 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ, ಶ್ರೀ ಕುಬೇರಪ್ಪ ಕೋಶಾಧಿಕಾರಿ 1862 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾದೇನಹಳ್ಳಿ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ಶ್ರೀಮತಿ ಚಂದ್ರಕಲಾ ಎಂ. ಕೆ. ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಹೊನ್ನಾಳಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ತಾಲೂಕಿನ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
