ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಉಡುಪಿ ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶದ ಸಭಾ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಿರಿಯ ಶ್ರೀಗಳು, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಮಹಾಸ್ವಾಮಿಗಳು ಮಹಾಲಕ್ಷ್ಮಿ ಕ್ಷೇತ್ರ ಮಾಣಿಲ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಕಿರಿಯ ಶ್ರೀಗಳು, ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರು ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಪಾನಮುಕ್ತ ಸದಸ್ಯರಿಗೆ ದುಶ್ಚಟ ಮುಕ್ತ ಸಮಾಜದ ನಿರ್ಮಾಣದಲ್ಲಿ ಶಿಬಿರಕ್ಕೆ ಸೇರಿದ ನವಜೀವನ ಸದಸ್ಯರ ಪಾತ್ರ ಬಹಳ ದೊಡ್ಡದು ಎಂದು ಆಶಿರ್ವದಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಅಪ್ಪಣ್ಣ ಹೆಗ್ಗಡೆಯವರಿಗೆ ಜನಜಾಗೃತಿ ವೇದಿಕೆ ವತಿಯಿಂದ ಅಭಿನಂದಿಸಲಾಯಿತು. ಮುಖ್ಯ ಅತಿಥಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಅನಿಲ್ ಕುಮಾರ್ ಎಸ್. ಎಸ್. ರವರು ಮಾತನಾಡುತ್ತಾ ಮಹಾತ್ಮ ಗಾಂಧೀಜಿ ಮಾಡಿದ ಕಾರ್ಯವನ್ನು ಮಹಾತ್ಮರೇ ಮಾಡಬೇಕಾಗಿರುತ್ತದೆ ಅಂತಹ ಕಾರ್ಯವನ್ನು ಮಹಾತ್ಮರಾದ ಪರಮಪೂಜ್ಯ ಖಾವಂದರು ಮಾಡುತ್ತಿದ್ದಾರೆ ಎಂದರು. ವೇದಿಕೆಯಲ್ಲಿ ಶ್ರೀ ಆರ್. ಬಿ. ಹೆಬ್ಬಳ್ಳಿ ಉದ್ಯಮಿಗಳು ಮುಂಬಯಿ, ಶ್ರೀ ದೇವದಾಸ್ ಹೆಬ್ಬಾರ್ ಮಾಜಿ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ ನವೀನ್ ಅಮೀನ್ ನಿಕಟಪೂರ್ವ ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ, ಶ್ರೀ ದುಗ್ಗೇ ಗೌಡ ಪ್ರಾದೇಶಿಕ ನಿರ್ದೇಶಕರು ಉಡುಪಿ, ಉಡುಪಿ ಜಿಲ್ಲಾ ವ್ಯಾಪ್ತಿಯ ತಾಲೂಕು ವೇದಿಕೆಯ ಅಧ್ಯಕ್ಷರುಗಳಾದ ಶ್ರೀ ಸತ್ಯಾನಂದ ನಾಯಕ್ ಉಡುಪಿ, ಶ್ರೀ ನೀರ್ ಕೃಷ್ಣಶೆಟ್ಟಿ ಹೆಬ್ರಿ, ಶ್ರೀ ಉದಯ್ ಕುಮಾರ್ ಹೆಗ್ಡೆ ಕಾರ್ಕಳ, ಶ್ರೀ ದಯಾನಂದ ಶೆಟ್ಟಿ ಹೆಜಮಾಡಿ ಕಾಪು, ಶ್ರೀ ಪ್ರಕಾಶ್ ಶೆಟ್ಟಿ ಬ್ರಹ್ಮಾವರ, ಶ್ರೀ ಉಮೇಶ್ ಶ್ಯಾನ್ಕಟ್ ಕುಂದಾಪುರ, ಶ್ರೀ ಸುಧಾಕರ ಆಚಾರ್ಯ ಬೈಂದೂರು, ಉಡುಪಿ ತಾಲೂಕು ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಶ್ರೀ ಶಿವಕುಮಾರ್, ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಲ್ಮಾಡಿ ಇವರುಗಳು ಗೌರವ ಉಪಸ್ಥಿತಿ ವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಒಕ್ಕೂಟದ ಪಧಾದಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸ್ವಯಂ ಸೇವಕರು ಭಾಗವಹಿಸಿದ್ದರು.
