ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ತಂಗಡಿ ತಾಲೂಕು ಉಜಿರೆ ವಲಯ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದ.ಕ. ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ, ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ-ಬೆಳಾಲು, ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ, ನವಜೀವನ ಸಮಿತಿ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ಬೆಳಾಲು ನವಜೀನವ ಸಮಿತಿ ಸದಸ್ಯರ 25ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ನಡೆಯುವ 1867 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಫ್ರೌಡ ಶಾಲೆಯಲ್ಲಿ ಜರುಗಿತು. ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ ಆಡಳಿತ ಮೊಕ್ತೇಸರರು ಶ್ರೀ ಜನಾರ್ಧನ ದೇವಸ್ಥಾನ ಉಜಿರೆ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉಧ್ಘಾಟಿಸಿ ಸಮಾಜದಲ್ಲಿ ನಾವು ಅನೇಕ ರೀತಿಯ ದುಶ್ಚಟಗಳನ್ನು ಗಮನಿಸುತ್ತಿದ್ದು, ಈ ದುಶ್ಚಟ ಸಮಾಜವನ್ನು ಗಂಭೀರವಾಗಿ ಹಾನಿ ಮಾಡುತ್ತದೆ. ಮದ್ಯಪಾನ ಅನ್ನುವುದು ಮದ್ಯಪಾನ ಮಾಡುವ ವ್ಯಕ್ತಿಗೆ ಪರಿಣಾಮ ಬೀರದೆ ಕುಟುಂಬ ಮತ್ತು ಸಮಾಜಕ್ಕೆ ದುಷ್ಪರಿಣಾಮ ಬೀರುತ್ತದೆ, ಸಮಾಜಕ್ಕೆ ಹೊರೆಯಾಗುವವರನ್ನು ಸಮಾಜಕ್ಕೆ ಆಸರೆಯಾಗಿ ಮಾಡುವ ಈ ಮದ್ಯವರ್ಜನ ಶಿಬಿರವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಶ್ರೀ ಗಣೇಶ್ ಆಚಾರ್ಯ ಜನಜಾಗೃತಿ ಯೋಜನಾಧಿಕಾರಿ, ಕರಾವಳಿ ಪ್ರಾದೇಶಿಕ ಕಛೇರಿ ಉಡುಪಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿ ಜನಜಾಗೃತಿ ವೇದಿಕೆ ಆರಂಭ, ಉದ್ದೇಶ, ಮದ್ಯವರ್ಜನ ಶಿಬಿರ ಅನುಷ್ಠಾನ, ರೂಪುರೇಷೆ, ಶಿಬಿರದ ದೈನಂದಿನ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕಾಸಿಂ ಮಲ್ಲಿಗೆ ಮನೆ, ಅಧ್ಯಕ್ಷರು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ತಿಮ್ಮಪ್ಪ ಗೌಡ ಮಾಜಿ ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಶ್ರೀ ಸೀತಾರಾಮ ಶೆಟ್ಟಿ ನಿವೃತ್ತ ಪ್ರಾದೇಶಿಕ ನಿರ್ದೇಶಕರು, ಶ್ರೀಮತಿ ಪುಷ್ಪ ಆರ್. ಶೆಟ್ಟಿ, ವಲಯಾಧ್ಯಕ್ಷರು ಜನಜಾಗೃತಿ ವೇದಿಕೆ ಉಜಿರೆ, ಶ್ರೀ ಕೃಷ್ಣಪ್ಪ ಗುಡಿಗಾರು ಮಾಜಿ ಅಧ್ಯಕ್ಷರು ಪಜಿರಡ್ಕ ದೇವಸ್ಥಾನ, ಶ್ರೀ ನಾರಾಯಣ ಗೌಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇವಾ ಸಹಕಾರಿ ಬ್ಯಾಂಕ್, ಶ್ರೀ ಪ್ರಶಾಂತ್ ಜೈನ್ ಮಾಲಕರು ಅಮೃತ್ ಟೆಕ್ಸ್ ಟೈಲ್, ಶ್ರೀ ಶ್ರೀನಿವಾಸ ಗೌಡ ಅಧ್ಯಕ್ಷರು 1867 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಬೆಳಾಲು, ಶಿಬಿರಾಧಿಕಾರಿ ಶ್ರೀ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಸಹಾಯಕಿ ಶ್ರೀಮತಿ ಪ್ರೆಸಿಲ್ಲಾ ಡಿ’ಸೋಜಾ, ಶ್ರೀ ಮಾಧವ ಗೌಡ ಆಡಳಿತ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ದಯಾನಂದ ಕ್ಷೇತ್ರ ಯೋಜನಾಧಿಕಾರಿ ಗುರುವಾಯನಕೆರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಸೀತಾರಾಮ ಕೇಂದ್ರ ಒಕ್ಕೂಟದ ಅಧ್ಯಕ್ಷರು ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಒಕ್ಕೂಟದ ವಲಯಾಧ್ಯಕ್ಷರಾದ ಶ್ರೀ ಉಮರ್, ಅಧ್ಯಕ್ಷರಾದ ಶ್ರೀ ರತ್ನಾಕರ, ಶ್ರೀ ಗಂಗಾಧರ, ಶ್ರೀಮತಿ ನೀಲಾವತಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀ ಸೂರಪ್ಪ, ವಲಯದ ಎಲ್ಲಾ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು, ಜನಜಾಗೃತಿ ಗ್ರಾಮ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಪ್ರಗತಿ ಬಂದು ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
