ಬೆಳಗಾವಿ 1 ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಧಿ ಸ್ಮೃತಿ ಮತ್ತು ಜಾಥ ಕಾರ್ಯಕ್ರಮ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಬೆಳಗಾವಿ 1 ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಧಿ ಸ್ಮೃತಿ ಮತ್ತು ಜಾಥ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ 1 ಜಿಲ್ಲಾ ವ್ಯಾಪ್ತಿಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ ನಾಯ್ಕ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಮೂ. ಕೊರವಿ ರವರು ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಶೀಲ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು.