ಹಾಲುರಾಮೇಶ್ವರ ಮತ್ತು ಹೊಸದುರ್ಗದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

Janajagurthi Vedike News

ಚಿತ್ರದುರ್ಗ ಪ್ರಾದೇಶಿಕ ವಿಭಾಗದ ಹಾಲುರಾಮೇಶ್ವರ ಮತ್ತು ಹೊಸದುರ್ಗ ಯೋಜನಾ ಕಛೇರಿಯಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಶ್ರೀ ಎಚ್. ಬಿಲ್ಲಪ್ಪ ರವರು ಉದ್ಘಾಟನೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವಿರೇಂದ್ರ ಹೆಗ್ಗಡೆಯವರು ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಮತ್ತು ಗಾಂಧೀಜಿ ಕಂಡ ರಾಮ ರಾಜ್ಯದ ಕನಸನ್ನು ನನಸ್ಸು ಮಾಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಬಿ. ಪಿ. ಓಂಕಾರಪ್ಪ ರವರು ಮಾತನಾಡಿ ಜಿಲ್ಲೆಯಲ್ಲಿ ಮದ್ಯವರ್ಜನ ಶಿಬಿರಗಳನ್ನು ಮಾಡುವ ಮುಖಾಂತರ ನೂರಾರು ಕುಟುಂಬಗಳು ಪಾನಮುಕ್ತ ಕುಟುಂಬಗಳಾಗಿ ನೆಮ್ಮದಿ ಜೀವನ ನಡೆಸುತ್ತಿದ್ದಾರೆ ಇಂತಹ ಕಾರ್ಯ ಮಾಡುತ್ತಿರುವ ಪೂಜ್ಯರಿಗೆ ನಮ್ಮ ಜಿಲ್ಲೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹಾಲುರಾಮೇಶ್ವರ ಮತ್ತು ಹೊಸದುರ್ಗ ಯೋಜನಾ ಕಛೇರಿಯ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಪ್ರಗತಿಬಂದು ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.