ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಮಲೇಬೆನ್ನೂರು ಹಾಗೂ ಹರಿಹರ ತಾಲೂಕಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ಸ್ಮೃತಿ ಕಾರ್ಯಕ್ರಮ ಮಲೇಬೆನ್ನೂರು ತಾಲ್ಲೂಕಿನ ಹೊಳೆ ಸಿರಿಗೆರೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಸವರಾಜ್ ಹೆಚ್. ಸಿ. ರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶ್ರೀ ಷ.ಬ್ರ.ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕಬ್ಬಿಣ ತಂತಿ ಮಠ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ರಟ್ಟಿಹಳ್ಳಿ ಹಾಗೂ ಜಾಥ ಉದ್ಘಾಟನೆಯನ್ನು ಶ್ರೀ ಎನ್. ಜಿ. ನಾಗಣಗೌಡ್ರು ಉಪಾಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ ಜಿಲ್ಲೆ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸ್ವಯಂಸೇವಕರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.
