ತರೀಕೆರೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಗಾಂಧಿ ಸ್ಮೃತಿ ಮತ್ತು ಪಾನಮುಕ್ತ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತರೀಕೆರೆ ತಾಲೂಕು, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಚಿಕ್ಕಮಗಳೂರು ಜಿಲ್ಲೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತರೀಕೆರೆ/ಅಜ್ಜಂಪುರ ತಾಲೂಕು ಇವರ ಸಹಯೋಗದೊಂದಿಗೆ ಗಾಂಧಿ ಸ್ಮೃತಿ ಮತ್ತು ಪಾನಮುಕ್ತ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ತರೀಕೆರೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು. ಮಹಾತ್ಮ ಗಾಂಧೀಜಿಯವರ ಆದರ್ಶ ತತ್ವಗಳನ್ನು ಪ್ರತಿ ಮನೆ-ಮನೆಗಳಲ್ಲಿ ಹಳ್ಳಿ-ಹಳ್ಳಿಗಳಲ್ಲಿ ಅನುಸರಿಸಿ ದುಶ್ಚಟಗಳನ್ನು ತ್ಯಜಿಸಿ ಜೀವನ ಸತ್ಯ ಸತ್ಯತೆ ಅರಿತು ಬಾಳಿದರೆ ಜೀವನ ಸಾರ್ಥಕ ಎಂದು ಶ್ರೀ ಮೋಹನ್ ಮನಸುಳಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಜಗತ್ತಿನ 200 ಕ್ಕೂ ಮಿಕ್ಕಿ ದೇಶಗಳು ಗಾಂಧೀಜಿಯವರ ವಿಚಾರದಾರೆಗಳನ್ನು ಅನುಸರಿಸುತ್ತಿವೆ, ವಿಶ್ವ ಒಪ್ಪಿರುವಂತ ಧೀಮಂತ ನಾಯಕರವರು. ಗಾಂಧಿ ಸ್ಮೃತಿ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಗಾಂಧೀಜಿಯವರ ಆದರ್ಶ ತತ್ವಗಳನ್ನು ನಾವು ಪಾಲಿಸಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ನಮಗೆ ಪ್ರೇರಣೆಯಾಗಿದೆ. ನಮ್ಮಲಿರುವ ದುಶ್ಚಟಗಳನ್ನು ತ್ಯಜಿಸಿ ಜೀವನದ ಸತ್ಯಾ ಸತ್ಯತೆ ಅರಿತು ನಾವು ಬಾಳಿದರೆ ಮಾತ್ರ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ಶ್ರೀ ಎ. ಸಿ. ಚಂದ್ರಪ್ಪ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕಮಗಳೂರು ರವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ಕೆಟ್ಟ ಆಲೋಚನೆಗಳಿಗೆ ಬೇಗ ಆಕರ್ಷಿತರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಇಂತಹ ದುಶ್ಚಟಗಳಿಗೆ ಬಲಿಯಾಗದೆ ಗಾಂಧೀಜಿಯವರ ಕನಸಿನ ರಾಮ ರಾಜ್ಯ ಕಲ್ಪನೆಗಳಿಗೆ ಅವಿರತವಾಗಿ ಶ್ರಮಿಸಬೇಕು. ಗ್ರಾಮಾಂತರ ಪ್ರದೇಶದಲ್ಲಿ ಮದ್ಯವರ್ಜನ ಶಿಬಿರ, ಶಾಲೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ತಾಲೂಕು ಯೋಜನಾಧಿಕಾರಿ ಶ್ರೀ ಕುಸುಮಾಧರ್ ಕೆ. ಪ್ರಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಪ್ರಮುಖವಾಗಿ ಕೆರೆಗಳ ಹೂಳೆತ್ತುವ ಕಾರ್ಯಕ್ರಮ, ಸುಜ್ಞಾನ ನಿಧಿ, ಹಾಲಿನ ಡೈರಿಗಳಿಗೆ ಪ್ರೋತ್ಸಾಹ ಧನ, ಧಾರ್ಮಿಕ ಕ್ಷೇತ್ರಗಳಿಗೆ ಪ್ರೋತ್ಸಾಹ ಧನ, ಕಡಿಮೆ ಬಡ್ಡಿದರದಲ್ಲಿ ಸಂಘಗಳ ಸದಸ್ಯರಿಗೆ ಸಾಲ ಸೌಲಭ್ಯಗಳು ನೀಡುತ್ತಾ ಬಂದಿದೆ. ಜನಜಾಗೃತಿ ವೇದಿಕೆಯ ಮೂಲಕವಾಗಿ ಶಾಲಾ ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ತಂಬಾಕು ವಿರೋಧಿ ಕಾರ್ಯಕ್ರಮ, ಮಾದಕ ವಸ್ತು ವಿರೋಧಿ ದಿನಾಚರಣೆಗಳಂತಹ ಹಾಗೂ ಗಾಂಧೀಜಿಯವರ ಕಂಡಂತಹ ರಾಮರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಗಾಂಧೀಜಿಯವರ ವಿಚಾರಧಾರೆಗಳನ್ನು ಜನರಿಗೆ ಮುಟ್ಟಿಸುವ ಸದುದ್ದೇಶದಿಂದ ಗಾಂಧಿ ಸ್ಮೃತಿ ಕಾರ್ಯಕ್ರಮಗಳಂತಹ ಹತ್ತು ಹಲವರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ನವಜೀವನ ಸದಸ್ಯರು ಸ್ವಸಹಾಯ ಸಂಘಗಳ ಒಕ್ಕೂಟದ ಮಾದರಿಯಲ್ಲಿ ನವಜೀವನ ಸಮಿತಿಗಳ ಒಕ್ಕೂಟಗಳನ್ನು ರಚನೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೈ ಜೋಡಿಸಿದರೆ ಮತ್ತಷ್ಟು ಜನಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಅಸ್ಲಾಂ ಖಾನ್, ಶ್ರೀ ಶ್ರೀಧರ್, ಶ್ರೀ ಮಲ್ಲಪ್ಪ ಮತ್ತು ಶ್ರೀಮತಿ ಕವಿತ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಜ್ಜಂಪುರ ತಾಲೂಕು ಯೋಜನಾಧಿಕಾರಿ ಶ್ರೀ ಸಂಜೀವ ಗೌಡ ಮಾತನಾಡಿ ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂಬ ಗಾಂಧೀಜಿಯವರ ಕನಸನ್ನು ನಾವು ನನಸು ಮಾಡಲು ಶ್ರಮಿಸಬೇಕು, ಪೂಜ್ಯ ವೀರೇಂದ್ರ ಹೆಗ್ಗಡೆಯವರ ಹಾಗೂ ಅಮ್ಮನವರ ಕಾರ್ಯಗಳು ಅವಿಸ್ಮರಣೀಯವಾದುದು, ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ಸದಸ್ಯರು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಗಣ್ಯ ವ್ಯಕ್ತಿಗಳು ಮತ್ತು ಪಾನಮುಕ್ತ ಸದಸ್ಯರಿಂದ ಪುಷ್ಪಾರ್ಚನೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲ್ಪಡುವ ಮದ್ಯವರ್ಜನ ಶಿಬಿರಗಳಿಗೆ ಸೇರಿ ಪಾನಮುಕ್ತಗೊಂಡ ಸದಸ್ಯರು ಮತ್ತು ಕುಟುಂಬಸ್ಥರು ತಮ್ಮ ಅನುಭವ ಅಭಿಪ್ರಾಯ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು, ಪಾನಮುಕ್ತ ಸದಸ್ಯರು ಉಪಸ್ಥಿತರಿದ್ದರು.