ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮೈಸೂರು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿಸ್ಮೃತಿ ಮತ್ತು ಪಾನಮುಕ್ತರ ಸಮಾವೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ಶ್ರೀ ತನ್ವೀರ್ ಸೇಠ್ ರವರು ಉದ್ಘಾಟನೆ ಮಾಡಿ ಸ್ವಾತಂತ್ರ ಪೂರ್ವದಲ್ಲಿ ದೇಶದ ಸ್ವಾತಂತ್ರಕ್ಕಾಗಿ ಅಹಿಂಸಾತ್ಮಕ ತತ್ವಗಳನ್ನು ರೂಡಿಸಿಕೊಂಡ ಹೋರಾಟ ನಡೆಸಿದ ಮಹನೀಯರ ವ್ಯಕ್ತಿತ್ವ ಮತ್ತು ಮೌಲ್ಯಗಳು ಭಾರತ ದೇಶದ ಅಭಿವೃದ್ಧಿ ಮತ್ತು ಯುವಜನತೆಯ ಏಳಿಗೆಗೆ ದಿಕ್ಸೂಚಿಯಾಗಿದೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ದೇವರಾಜ ಉಪವಿಭಾಗದ ಎ.ಸಿ.ಪಿ. ಶ್ರೀ ಶಾಂತಮಲ್ಲಪ್ಪ, ಸಾಹಿತಿಗಳಾದ ಶ್ರೀ ಮಹೇಶ್ ಚೆಟ್ನಳ್ಳಿ, ಮೈಸೂರು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಕೆ. ಎನ್. ಪ್ರಭುಸ್ವಾಮಿ, ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಬಿ. ಜಯರಾಮ ನೆಲ್ಲಿತ್ತಾಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಕೆ. ದೀಪಕ್, ಜಿಲ್ಲಾ ನಿರ್ದೇಶಕರಾದ ಶ್ರೀ ವಿ. ವಿಜಯ್ ಕುಮಾರ್ ನಾಗನಾಳ, ಮೈಸೂರು ಜಿಲ್ಲೆಯ ಎಲ್ಲಾ ತಾಲೂಕಿನ ಯೋಜನಾಧಿಕಾರಿಗಳು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಪ್ರಮೋದ್, ಶ್ರೀ ವರದರಾಜ್, ಶ್ರೀ ನಂಜುಂಡಮೂರ್ತಿ, ಕಿರಗಸೂರು ಶ್ರೀ ಶಂಕರ್, ಬನ್ನೂರು ಶ್ರೀ ನಾರಾಯಣ್, ಲತಾ ಮುದ್ದುಮೋಹನ್, ಶ್ರೀ ಸೋಮಶೇಖರ ಮೂರ್ತಿ, ಶ್ರೀ ಮಣಿಯಯ್ಯರ್ ರವರು ಉಪಸ್ಥಿತರಿದ್ದರು.