ಹೆಬ್ರಿ ತಾಲೂಕಿನಲ್ಲಿ 1869 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಹೆಬ್ರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ, ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಆರಕ್ಷಕ ಠಾಣೆ ಶಂಕರ್ ನಾರಾಯಣ ಅಮಾಸೆಬೈಲು ಹೆಬ್ರಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ವೆ ವಲಯ ಇವರ ಸಹಯೋಗದೊಂದಿಗೆ 1869 ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ಠಾಣಾ ಅಧಿಕಾರಿಯವರಾದ ಶ್ರೀ ನಾಸಿರ್ ಹುಸೇನ್, ಅಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ ಆರ್ಡಿ, ಶ್ರೀ ನವೀನ್ ಚಂದ್ರ ಶೆಟ್ಟಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ, ಶ್ರೀ ನೀರೇ ಕೃಷ್ಣ ಶೆಟ್ಟಿ ಅಧ್ಯಕ್ಷರು ಹೆಬ್ರಿ ತಾಲೂಕು ಜನಜಾಗೃತಿ ವೇದಿಕೆ, ಶ್ರೀ ವಸಂತ್ ಕುಮಾರ್ ಶೆಟ್ಟಿ ವಲಯ್ಯಾಧ್ಯಕ್ಷರು ಇವರುಗಳ ಉಪಸ್ಥಿತಿಯಲ್ಲಿ ನೆರವೇರಿತು. ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಶ್ರೀ ವಿದ್ಯಾಧರ್, ಆರೋಗ್ಯ ಕಾರ್ಯಕರ್ತರಾದ ಶ್ರೀಮತಿ ಜಯಲಕ್ಷ್ಮಿ, ಉಡುಪಿ ಪ್ರಾದೇಶಿಕ ವಿಭಾಗದ ಮೇಲ್ವಿಚಾರಕರಾದ ನಿತೀಶ್, ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ತಂಡದ ಸದಸ್ಯರು, ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.