ಶಿವಮೊಗ್ಗ ತಾಲೂಕಿನ ನವುಲೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ನವುಲೆ ಶಿವಮೊಗ್ಗ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಶಿವಮೊಗ್ಗ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಶಿವಮೊಗ್ಗ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅಬ್ಬಲಗೆರೆ ವಲಯ, ವಿವಿಧ ಸಂಘ ಸಂಸ್ಥೆಗಳು, ಹಾಗೂ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನ, ನವುಲೆ ಸಾರ್ವಜನಿಕರ ಸಹಕಾರದೊಂದಿಗೆ ಜರುಗುವ 1890 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಶಿವಮೊಗ್ಗ ತಾಲೂಕಿನ ನವುಲೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಿಥುನ್ ಕುಮಾರ್ ಐ.ಪಿ.ಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇವರು ನೆರವೇರಿಸಿ ಉದ್ಘಾಟಕಾ ಮಾತುಗಳನ್ನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು. ಶ್ರೀ ಮಂಜುನಾಥ ಎನ್. ಆರ್. ಅಧ್ಯಕ್ಷರು 1890 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಶಿವಮೊಗ್ಗ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ನಾಗರಾಜ್ ಕುಲಾಲ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಚಿತ್ರದುರ್ಗ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಮುರಳೀಧರ್ ಶೆಟ್ಟಿ ಕೆ. ಮಾನ್ಯ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಶಿವಮೊಗ್ಗ ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಈಶ್ವರಪ್ಪ ಎಂ. ಗೌರವಾಧ್ಯಕ್ಷರು 1890 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಶಿವಮೊಗ್ಗ, ಶ್ರೀ ಶೇಖರಪ್ಪ ಅಧ್ಯಕ್ಷರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ನವುಲೆ, ಶ್ರೀ ಸುಂದರೇಶ್ ಅಧ್ಯಕ್ಷರು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ವಿಶ್ವಾಸ್ ಸದಸ್ಯರು ಮಹಾನಗರ ಪಾಲಿಕೆ ಶಿವಮೊಗ್ಗ, ಶ್ರೀ ರಮೇಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ಉದಯ ಕುಮಾರ್ ಶೆಟ್ಟಿ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀಮತಿ ಮಮತ ಶಿವಣ್ಣ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಶಿವಮೊಗ್ಗ, ಶ್ರೀ ರಮೇಶ್ ಕತ್ತಿಗೆ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ದಾವಣಗೆರೆ, ಶ್ರೀ ರಾಮಚಂದ್ರ ವಕೀಲರು ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಉಪಸ್ಥಿತರಿದ್ದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಬ್ಬಲಗೆರೆ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.